ಬೆಂಗಳೂರು: ಚುನಾವಣ ಪೂರ್ವದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶುಕ್ರವಾರ ಘೋಷಿಸಿದ ಬೆನ್ನಲ್ಲೇ ಬಿಜೆಪಿಗೆ ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ಟಾಂಗ್ ನೀಡಿದೆ.
”ನಳಿನ್ ಕುಮಾರ್ ಕಟೀಲ್ ಅವರೇ,ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬಸವರಾಜ್ ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ! ಶೋಭಾ ಕರಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ!, ಸಿ.ಟಿ.ರವಿ ಅವರೇ, ನಿಮ್ಮ ಮನೆಯವರಿಗೂ 2000 ರೂ.ಫ್ರೀ!.ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!ಇದು ನಮ್ಮ ಗ್ಯಾರಂಟಿ.” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
,@nalinkateel ಅವರೇ,
ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!@BSBommai ಅವರೇ, ನಿಮ್ಮ ಮನೆಗೂ ಫ್ರೀ!@ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ!@CTRavi_BJP ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!
ಇದು ನಮ್ಮ ಗ್ಯಾರಂಟಿ.
— Karnataka Congress (@INCKarnataka) June 2, 2023
”ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು.ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅತ್ಯಂತ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತನಾಡಿ ಯೋಜನೆಗಳನ್ನು ಹೆಚ್ಚಿನ ಷರತ್ತುಗಳಿಲ್ಲದೇ ಜಾರಿ ಮಾಡುವುದಾಗಿ ಘೋಷಿಸಿದರು. ಸಂಪುಟ ಸಚಿವರು ಈ ವೇಳೆ ಹಾಜರಿದ್ದರು.