BREAKING NEWS

ಕಾಂಗ್ರೆಸ್‌ಗೆ ‘ಭಾರತ್ ಜೋಡೋ’, ಬಿಜೆಪಿ-ಆರ್‌ಎಸ್‌ಎಸ್‌ಗೆ ‘ಭಾರತ್ ತೋಡೋ’ ಸಿದ್ಧಾಂತವಿದೆ: ರಾಗಾ

ಪಾಟ್ನಾ: ಪ್ರತಿಪಕ್ಷಗಳ ಸಭೆಗೂ ಮುನ್ನ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೋರಾಡಲು ಒಗ್ಗಟ್ಟಿನಿಂದ ಇರುವಂತೆ ತಮ್ಮ ಪಕ್ಷದ ನಾಯಕರಿಗೆ ಮನವಿ ಮಾಡಿದರು ಮತ್ತು ‘ಭಾರತ್ ಜೋಡೋ’ ನಮ್ಮ ನಂಬಿಕೆ. ಆದರೆ, ಕಾಂಗ್ರೆಸ್‌ಗೆ ವ್ಯತಿರಿಕ್ತವಾಗಿ ಬಿಜೆಪಿ-ಆರ್‌ಎಸ್‌ಎಸ್ ‘ಭಾರತ್ ತೋಡೋ’ ಸಿದ್ಧಾಂತವನ್ನು ಹೊಂದಿದೆ ಎಂದು ದೂರಿದರು.

2024ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಇಂದು ಪಾಟ್ನಾದಲ್ಲಿ ಸಭೆ ನಡೆಸಲಿವೆ. ಸಭೆಗೆ ಹಾಜರಾಗಲು ಪಾಟ್ನಾಗೆ ಆಗಮಿಸಿರುವ ರಾಹುಲ್ ಗಾಂಧಿ, ಪಕ್ಷದ ಕಚೇರಿಯಲ್ಲಿ ಮಾತನಾಡಿದರು. ನಾವು ಬಿಹಾರವನ್ನು ಗೆದ್ದರೆ ಇಡೀ ದೇಶವನ್ನು ಗೆಲ್ಲುತ್ತೇವೆ ಎಂದು ಹೇಳಿದರು.
https://twitter.com/ANI/status/1672117128621858817?s=20
‘ಸದ್ಯ ಭಾರತದಲ್ಲಿ ಸಿದ್ಧಾಂತದ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷವು ‘ಭಾರತ್ ಜೋಡೋ’ (ಭಾರತವನ್ನು ಒಂದುಗೂಡಿಸುವ) ಸಿದ್ಧಾಂತವನ್ನು ಹೊಂದಿದ್ದರೆ, ಬಿಜೆಪಿ-ಆರ್‌ಆರ್‌ಎಸ್ ‘ಭಾರತ್ ತೋಡೋ’ (ಭಾರತದವನ್ನು ಒಡೆಯುವ) ಸಿದ್ಧಾಂತವನ್ನು ಹೊಂದಿದೆ. ನಾವು ದೇಶದಲ್ಲಿ ಪ್ರೀತಿಯನ್ನು ಹರಡುತ್ತೇವೆ ಮತ್ತು ಮೊಹಬ್ಬತ್ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ, ಬಿಜೆಪಿ-ಆರ್‌ಎಸ್‌ಎಸ್ ದ್ವೇಷ ಮತ್ತು ಸಮಾಜವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕ ಹೇಳಿದರು.

‘ಭಾರತ್ ಜೋಡೋ ಯಾತ್ರೆ ನಡೆಯುತ್ತಿರುವಾಗ ನಾವು ಹೋದಲ್ಲೆಲ್ಲಾ ಬಿಹಾರದ ಜನ ಸಿಗುತ್ತಿದ್ದರು. ನನ್ನನ್ನು ಭೇಟಿಯಾಗಲು ಬರುತ್ತಿದ್ದವರನ್ನು ನಾನು ಎಲ್ಲಿಯವರು ಎಂದು ಕೇಳಿದಾಗ, ಅವರು ಬಿಹಾರ ಎಂದು ನನಗೆ ತಿಳಿಸಿದರು. ನಾನು ಕೇರಳ, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಪಂಜಾಬ್ ಮತ್ತು ಕಾಶ್ಮೀರದಲ್ಲಿ ನಡೆದಿದ್ದೇನೆ ಮತ್ತು ಬಿಹಾರದ ಜನರನ್ನು ನಾನು ಎಲ್ಲೆಡೆ ಕಂಡಿದ್ದೇನೆ’ ಎಂದು ಹೇಳಿದರು.

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಬಿಜೆಪಿಯನ್ನು ಸೋಲಿಸಲಿವೆ. ದ್ವೇಷವನ್ನು ದ್ವೇಷದಿಂದ ಎದುರಿಸಲು ಸಾಧ್ಯವಿಲ್ಲ ಎಂದು ನಿಮಗೆ ತಿಳಿದಿದೆ. ಅದನ್ನು ಪ್ರೀತಿಯಿಂದ ಮಾತ್ರ ಸೋಲಿಸಬಹುದು. ದೇಶವನ್ನು ಒಗ್ಗೂಡಿಸಲು ಮತ್ತು ಪ್ರೀತಿಯನ್ನು ಹರಡಲು ಕಾಂಗ್ರೆಸ್ ಶ್ರಮಿಸುತ್ತಿದೆ. ಅದಕ್ಕಾಗಿಯೇ ನಾವು ಬಿಹಾರಕ್ಕೆ ಬಂದಿದ್ದೇವೆ ಏಕೆಂದರೆ, ಕಾಂಗ್ರೆಸ್‌ನ ಡಿಎನ್‌ಎ ಬಿಹಾರದಲ್ಲಿದೆ ಎಂದು ಅವರು ಹೇಳಿದರು.

‘ಕರ್ನಾಟಕದಲ್ಲಿ ಬಿಜೆಪಿ ನಾಯಕರು ಭಾಷಣ ಮಾಡಿದರು ಮತ್ತು ಎಲ್ಲೆಡೆ ಹೋದರು. ಆದರೆ, ಫಲಿತಾಂಶವನ್ನು ನೀವು ನೋಡಿದಿರಿ. ‘ಕಾಂಗ್ರೆಸ್ ಒಗ್ಗಟ್ಟಾಗಿ ನಿಂತ ತಕ್ಷಣ ಕರ್ನಾಟಕದಲ್ಲಿ ಬಿಜೆಪಿ ಕಣ್ಮರೆಯಾಯಿತು’. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಎಲ್ಲಿಯೂ ಇರುವುದಿಲ್ಲ ಮತ್ತು ಕಾಂಗ್ರೆಸ್ ಗೆಲ್ಲುತ್ತದೆ ಎಂದು ನಾನು ಈ ಹಂತದಿಂದಲೇ ಹೇಳುತ್ತಿದ್ದೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದ ಜನರನ್ನು ಒಗ್ಗೂಡಿಸಲು ಮುಂದಾಗಿರುವವರು ರಾಹುಲ್ ಗಾಂಧಿ. ಅವರು ದೇಶದ ಪ್ರತಿಯೊಂದು ರಾಜಕೀಯ ಪಕ್ಷಗಳೊಂದಿಗೆ ಮಾತನಾಡಲು ಮುಂದಾದರು ಎಂದು ಹೇಳಿದರು.

‘ನಾವು ಪಾಟ್ನಾದಲ್ಲಿ 20 ವಿರೋಧ ಪಕ್ಷಗಳು ಸಭೆ ಸೇರುತ್ತಿದ್ದೇವೆ ಮತ್ತು 2024ರಲ್ಲಿ ನಾವು ಒಟ್ಟಾಗಿ ಹೋರಾಡುತ್ತೇವೆ. ನಮ್ಮ ನಡುವಿನ ಆಂತರಿಕ ಭಿನ್ನಭಿಪ್ರಾಯಗಳನ್ನು ತೆಗೆದುಹಾಕಲು ಬಿಹಾರದ ಜನರನ್ನು ಕೇಳಲು ಬಯಸುತ್ತೇನೆ. ನಾವು ಬಿಹಾರವನ್ನು ಗೆದ್ದರೆ ನಾವು ಇಡೀ ದೇಶವನ್ನು ಗೆಲ್ಲುತ್ತೇವೆ’ ಎಂದು ಖರ್ಗೆ ಹೇಳಿದರು.

ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಪಾಟ್ನಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಪಕ್ಷದ ಬೆಂಬಲಿಗರು ಉಪಸ್ಥಿತರಿದ್ದರು.

ಇಬ್ಬರೂ ನಾಯಕರು ನೇರವಾಗಿ ಕಾಂಗ್ರೆಸ್ ಕಚೇರಿ ‘ಸದಕತ್ ಆಶ್ರಮ’ಕ್ಕೆ ಆಗಮಿಸಿದರು. ಅಲ್ಲಿ ಅವರನ್ನು ರಾಜ್ಯದ ಪಕ್ಷದ ಮುಖಂಡರು ಸ್ವಾಗತಿಸಿದರು. ‘ಮೊಹಬ್ಬತ್ ಕಿ ದುಕಾನ್’ ಘೋಷಣೆಯನ್ನು ಎತ್ತಿ ತೋರಿಸುವ ಹೆಚ್ಚಿನ ಸಂಖ್ಯೆಯ ಹೋರ್ಡಿಂಗ್‌ಗಳು ಮತ್ತು ಇತರ ಪ್ರದರ್ಶನ ಫಲಕಗಳನ್ನು ಪಕ್ಷವು ಪಾಟ್ನಾದಲ್ಲಿ ಸ್ಥಾಪಿಸಿದೆ.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

33 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

41 mins ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

1 hour ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

2 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago