Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಕಾಂಗ್ರೆಸ್​ನವರು ಕೆಲವರಿಗೆ ಬ್ಲಾಕ್​ಮೇಲ್ ಮಾಡುತ್ತಿದ್ದಾರೆ : ಅಶ್ವತ್ಥ್ ನಾರಾಯಣ

ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್​​ ನಾರಾಯಣ ಆರೋಪ ಮಾಡಿದ್ದಾರೆ. ಬಿಸಿ ಪಾಟೀಲ್, ರಾಜುಗೌಡರಿಂದ ಡಿಕೆ ಶಿವಕುಮಾರ್​​ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಮದವರೊಂದಿಗೆ ಅವರು ಮಾತನಾಡಿದರು.

ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿದ್ದಾರೆ. ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯವಿದ್ದೇವೆ, ಗೆಳೆಯರಿದ್ದೇವೆ ಎಂದು ಹೇಳಿದರು.

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ಸಚಿವ ಉದಯನಿಧಿಯಿಂದ ದುರಹಂಕಾರದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಸಚಿವ ಉದಯನಿಧಿ​ ಸ್ಟಾಲಿನ್​ ಹೇಳಿಕೆ ಅಜ್ಞಾನದಿಂದ ಕೂಡಿದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ