ತೆಲಂಗಾಣ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ.
ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸಿತ್ತು. ಈ ವೇಳೆ ಕರ್ನಾಟಕ ಚುನಾವಣೆಯಲ್ಲಿ ಗ್ಯಾರಂಟಿ ಅಸ್ತ್ರಗಳನ್ನು ಪ್ರಯೋಗಿಸಿದಂತೆ, ಪ್ರಮುಖ 6 ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಪ್ರಮುಖರು ಭಾಗಿಯಾಗಿದ್ದರು.
ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್ ನಾಯಕರು ತಮ್ಮ ಫೋಟೋಗಳ ಜೊತೆಗೆ ರಾಷ್ಟ್ರೀಯ ನಾಯಕರ ಕಟೌಟ್ ಮತ್ತು ಬ್ಯಾನರ್ಗಳನ್ನು ಹಾಕಿದ್ದರು. ಅದರ ಒಂದು ಕಟೌಟ್ನಲ್ಲಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿದ್ದಾರೆ. ರಾಷ್ಟ್ರಧ್ವಜ ಬಣ್ಣದ ಸೀರೆಯನ್ನು ಸೋನಿಯಾ ಗಾಂಧಿಗೆ ತೊಡಿಸಿ, ಆಭರಣಗಳನ್ನು ಹಾಕಿ ಭಾರತ ಮಾತೆಯ ರೀತಿಯಲ್ಲಿ ಕಟೌಟ್ ನಿಲ್ಲಿಸಲಾಗಿದೆ.
ಈ ಕಟೌಟ್ ಬಿಜೆಪಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಜಾಮೀನಿನ ಮೇಲೆ ಹೊರಗಿರುವ ಸೋನಿಯಾ ಗಾಂಧಿಯನ್ನು ಹೋಲಿಸಿ ಭಾರತ ಮಾತೆಗೆ ಕಾಂಗ್ರೆಸ್ ಅವಮಾನಿಸಿದೆ. ಸೋನಿಯಾ ಕಾಂಗ್ರೆಸ್ ನ ಹಗರಣಗಳ ಆರೋಪಿ ಮತ್ತು ಪಕ್ಷದ ರಾಜಮಾತೆ ಆಗಿರಬಹುದು. ಆದರೆ ಅವರು ಎಂದಿಗೂ ಸ್ಪಿರಿಟ್ ಆಫ್ ಭಾರತವನ್ನು ಪ್ರತಿನಿಧಿಸುವುದಿಲ್ಲ. ದೇಶದ ಕಲ್ಪನೆಗೆ ಸೋನಿಯಾಗಿಂತ ಹೆಚ್ಚಿನ ಹಾನಿಯನ್ನು ಯಾರೂ ಮಾಡಿಲ್ಲ. ಈ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಇಡೀ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…