ಬೆಂಗಳೂರು : ಕಾಂಗ್ರೆಸ್‌ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೂ ಸಿಗುತ್ತಿಲ್ಲ, ಹಾಗಾಗಿ ಬೇರೆ ಪಕ್ಷಗಳಿಂದ ಆಮದು ಮಾಡಿಕೊಳ್ಳಲು ಮುಂದಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಮಲವನ್ನೇ ಅರಳಿಸುತ್ತೇವೆಂದು ಜನ ತೀರ್ಮಾನ ಮಾಡಿರುವಾಗ, ನಿಮ್ಮ ಹಳೇ ಬಂಡಿಗೆ ಎಷ್ಟೇ ಬಣ್ಣ ಬಳಿದರೂ ಬಂಡಿ ಮಾತ್ರ ಹೊಸತಾಗುವುದಿಲ್ಲ’ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದೆ.
‘ಕಾಂಗ್ರೆಸ್‌ನಲ್ಲಿ ಚುಕ್ಕಾಣಿ ಹಿಡಿದವರಿಗೆ ದುಡ್ಡೇ ದೊಡ್ಡಪ್ಪ. ಹಣಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ತಯಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಣಕ್ಕಾಗಿ ಟಿಕೆಟ್ ಮಾರಿಕೊಂಡು ಸ್ವಂತ ಸಮುದಾಯದವರಿಗೇ ಅನ್ಯಾಯ ಮಾಡಿದ್ದಾರೆಂಬ ಕೂಗು ದಾಸರಹಳ್ಳಿ ಕ್ಷೇತ್ರದಿಂದ ಕೇಳಿಬಂದಿದೆ. ಇನ್ನುಳಿದ ಕ್ಷೇತ್ರಗಳ ಕಥೆಯೂ ಇದೇ ಇರಬಹುದು’ ಎಂದು ಬಿಜೆಪಿ ಕಿಡಿಕಾರಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…