Mysore
24
broken clouds

Social Media

ಬುಧವಾರ, 30 ಏಪ್ರಿಲ 2025
Light
Dark

ಸುಭಾಷ್ ಚಂದ್ರ ಬೋಸ್ ಹತ್ಯೆ ಮಾಡಿದ್ದು ಕಾಂಗ್ರೆಸ್ ನವರು : ಯತ್ನಾಳ್ ಆರೋಪ

ರಾಯಚೂರು : ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿರುವುದು ಕಾಂಗ್ರೆಸ್​ನವರೇ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿರುವ ಕುರಿತು ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯತ್ನಾಳ್, ಕಾಂಗ್ರೆಸ್ ಪಕ್ಷದವರೇ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸುಭಾಷ್ ಚಂದ್ರ ಬೋಸ್ ಸಾವು ಇಂದಿಗೂ ಪ್ರಶ್ನಾರ್ಥಕ ಚಿಹ್ನೆ. ಇದು ಕೊಲೆಯೋ ಅಥವಾ ವಿಮಾನ ಅಪಘಾತವೋ ಎಂಬುದನ್ನು ಕಾಂಗ್ರೆಸ್ ನಾಯಕರು ಮರೆಮಾಚಿದ್ದಾರೆ. ದೇಶದ ಮೊದಲ ಪ್ರಧಾನಿ ನೆಹರೂ ಅವರ ಕಾರಣದಿಂದಲೇ ಬೋಸ್ ಅವರ ಹತ್ಯೆಯಾಯಿತು ಎಂದು ಅನೇಕ ಜನರು ಹೇಳುತ್ತಾರೆ ಎಂದು ಯತ್ನಾಳ್ ಹೇಳಿರುವುದಾಗಿ ಐಎಎನ್​ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಸನಾತನ ಧರ್ಮದ ಬಗ್ಗೆ ಮಾತನಾಡುವವರಿಗೆ ಎಚ್‌ಐವಿ ಏಡ್ಸ್ ಮತ್ತು ಕುಷ್ಠರೋಗಗಳು ಬಂದಿವೆ ಎಂದು ಅವರು ವಾಗ್ದಾಳಿ ನಡೆಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ