BREAKING NEWS

ಸುಭಾಷ್ ಚಂದ್ರ ಬೋಸ್ ಹತ್ಯೆ ಮಾಡಿದ್ದು ಕಾಂಗ್ರೆಸ್ ನವರು : ಯತ್ನಾಳ್ ಆರೋಪ

ರಾಯಚೂರು : ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿರುವುದು ಕಾಂಗ್ರೆಸ್​ನವರೇ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿರುವ ಕುರಿತು ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯತ್ನಾಳ್, ಕಾಂಗ್ರೆಸ್ ಪಕ್ಷದವರೇ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸುಭಾಷ್ ಚಂದ್ರ ಬೋಸ್ ಸಾವು ಇಂದಿಗೂ ಪ್ರಶ್ನಾರ್ಥಕ ಚಿಹ್ನೆ. ಇದು ಕೊಲೆಯೋ ಅಥವಾ ವಿಮಾನ ಅಪಘಾತವೋ ಎಂಬುದನ್ನು ಕಾಂಗ್ರೆಸ್ ನಾಯಕರು ಮರೆಮಾಚಿದ್ದಾರೆ. ದೇಶದ ಮೊದಲ ಪ್ರಧಾನಿ ನೆಹರೂ ಅವರ ಕಾರಣದಿಂದಲೇ ಬೋಸ್ ಅವರ ಹತ್ಯೆಯಾಯಿತು ಎಂದು ಅನೇಕ ಜನರು ಹೇಳುತ್ತಾರೆ ಎಂದು ಯತ್ನಾಳ್ ಹೇಳಿರುವುದಾಗಿ ಐಎಎನ್​ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಸನಾತನ ಧರ್ಮದ ಬಗ್ಗೆ ಮಾತನಾಡುವವರಿಗೆ ಎಚ್‌ಐವಿ ಏಡ್ಸ್ ಮತ್ತು ಕುಷ್ಠರೋಗಗಳು ಬಂದಿವೆ ಎಂದು ಅವರು ವಾಗ್ದಾಳಿ ನಡೆಸಿದರು.

lokesh

Recent Posts

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

6 mins ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

50 mins ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

1 hour ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

2 hours ago

ಇರುವೆ ಕಚ್ಚಿ ಶಿಶು ಸಾವು ಪ್ರಕರಣ ; ವೈದ್ಯರು ಸೇರಿ 7 ಮಂದಿಗೆ ಶೋಕಾಸ್‌ ನೋಟಿಸ್

ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು…

2 hours ago