BREAKING NEWS

ಲೋಕಸಭೆಯಿಂದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ‘ಅಶಿಸ್ತಿನ’ ವರ್ತನೆಗಾಗಿ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.

ಲೋಕಸಭೆಯಲ್ಲಿ ತಮ್ಮ ಭಾಷಣದ ವೇಳೆ ಪ್ರಧಾನಿ ಮೋದಿ ವಿರುದ್ಧ ಸರಣಿ ವಾಗ್ದಾಳಿ ನಡೆಸಿದ ರಂಜನ್‌ ಚೌಧರಿ, ಮಹಾಭಾರತವನ್ನು ಉಲ್ಲೇಖಿಸಿದ್ದಾರೆ. ಹಸ್ತಿನಾಪುರದಲ್ಲಾಗಲೀ ಅಥವಾ ಮಣಿಪುರದಲ್ಲಾಗಲೀ ಮಹಿಳೆಯರ ವಿರುದ್ಧ ಏನು ನಡೆಯುತ್ತಿದೆ ಎಂಬುದರ ಬಗ್ಗೆ ರಾಜ ಕುರುಡನಾಗಬಾರದು ಎಂದು ಚೌಧರಿ ಟೀಕಿಸಿದ್ದಾರೆ.

ಚೌಧರಿ ಟೀಕೆಗೆ ಗೃಹ ಸಚಿವ ಅಮಿತ್ ಶಾ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಚೌಧರಿ ಅವರು ಸಂಸತ್ತಿನಲ್ಲಿ ಸಂಯಮದಿಂದ ಮತ್ತು ಸದನದ ಸೌಜನ್ಯವನ್ನು ಕಾಪಾಡಿಕೊಳ್ಳುವಂತೆ ನೋಡಲು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಒತ್ತಾಯಿಸಿದ್ದಾರೆ.

ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರಿಗೆ ಯಾವುದೇ ಸಮಸ್ಯೆಗಳಿಲ್ಲದಿದ್ದಾಗ ಅಮಿತ್‌ ಶಾ ಯಾಕೆ ಕೋಪಗೊಳ್ಳುತ್ತಿದ್ದಾರೆ ಎಂದು ಚೌಧರಿ ಮರುಪ್ರಶ್ನೆ ಹಾಕಿದ್ದಾರೆ. ಧ್ರುವೀಕರಣ, ಕೋಮುವಾದ ಮತ್ತು ಕೇಸರಿಕರಣ ಭಾರತವನ್ನು ತೊರೆಯುವ ಸಮಯ ಬಂದಿದೆ ಎಂದು ಚೌಧರಿ ಹೇಳಿದ್ದು, ಬಿಜೆಪಿ ಸಂಸದರು ಚೌಧರಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್‌ ಓಂ ಬಿರ್ಲಾ ಕೂಡಾ ಚೌಧರಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

andolanait

Recent Posts

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

2 mins ago

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 mins ago

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…

23 mins ago

ಕನ್ನಡ ನಾಡು ನುಡಿ ನಮ್ಮ ಹೆಮ್ಮೆ : ಹಾಡಿ ಹೊಗಳಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…

25 mins ago

ಕಾಂಗ್ರೆಸ್ಸೇ ಅಹಿಂದ : ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ವಿಶ್ವನಾಥ್‌ ಟಾಂಗ್‌

ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…

28 mins ago

ಮೈಸೂರು ಅರಮನೆ ವೀಕ್ಷಣೆಗೂ ಬಂಕಿಂಗ್‌ ಹ್ಯಾಮ್‌ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…

55 mins ago