ಕಲಬುರಗಿ : ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ.
ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.
ತಡರಾತ್ರಿ ಎರಡು ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ ಎಂದು ಗೊತ್ತಾಗಿದೆ.
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…