Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ʼಕೈʼ ನಾಯಕ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ!

ಚಿಕ್ಕಬಳ್ಳಾಪುರ: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ.

ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದರು.

ಕೇವಲ ರಾಜಕಾರಣಿಯಾಗದ ವೀರಪ್ಪ ಮೊಯ್ಲಿ ಅವರು, ಸಾಹಿತಿ ಕೂಡ ಆಗಿದ್ದಾರೆ. ಅವರ ಹೆಂಡತಿ ಮಾಲತಿ ಮೊಯ್ಲಿ ಸಹ ಲೇಖಕಿಯಾಗಿದ್ದಾರೆ.

ವೀರಪ್ಪ ಮೊಯ್ಲಿ ಅವರು ಸುಳಿಗಾಳಿ, ಸಾಗರದೀಪ, ಕೊಟ್ಟ, ತೆಂಬರೆ ಸೇರಿದಂತೆ ವಿವಿಧ ಕಾದಂಬರಿಗಳನ್ನು ಬರೆದಿದ್ದಾರೆ. ಇದಲ್ಲದೇ ನಾಟಕ, ಕವನ ಸಂಕಲನ, ಮಹಾಕಾವ್ಯಗಳನ್ನು ಬರೆದಿದ್ದಾರೆ.

Tags:
error: Content is protected !!