BREAKING NEWS

ಕಾಂಗ್ರೆಸ್ ಮ್ಯಾನಿಫೆಸ್ಟೋ ಮುಸ್ಲಿಂ ಲೀಗ್ ಪ್ರಣಾಳಿಕೆಯಂತಿದೆ : ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ

ಹುಬ್ಬಳ್ಳಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಸುಳ್ಳಿನ ಕಂತೆಯಾಗಿದೆ. ಅದರಲ್ಲಿ ಆಕಾಶ ಮತ್ತು ಪಾತಾಳವನ್ನು ಒಂದು ಮಾಡಿ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ನೋಡಿದರೆ ಇವರು 40 ವರ್ಷ ಅಧಿಕಾರ ಮಾಡಿದ್ದಾರೆ. ಆದರೆ ಈವರೆಗೆ ಯಾವುದೇ ಅಭಿವೃದ್ಧಿ ಆಗಿಲ್ಲ ಎನ್ನುವುದು ಅರಿವಾಗುತ್ತದೆ. ದುರಾಡಳಿತ ಮಾಡಿ ಚುನಾವಣೆ ಹತ್ತಿರ ಬಂದಾಗ ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ರೈತರು, ದಲಿತರ ಹೆಸರಿನಲ್ಲಿ ಪುಂಖಾನುಪುಂಖವಾಗಿ ಸುಳ್ಳು ಹೇಳುತ್ತಿದೆ ಎಂದು ಹರಿಹಾಯ್ದರು.

ಈ ಹಿಂದೆ ಉತ್ತರಾಖಂಡದಲ್ಲಿ ಸಹ ಇದೇ ತರಹ ಕಾಂಗ್ರೆಸ್ ಸುಳ್ಳು ಭರವಸೆ ನೀಡಿತ್ತು. ಅದರೆ ಅಲ್ಲಿನ ಜನರು ಸೊಪ್ಪು ಹಾಕದೇ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಕೂಡಾ ಜನರು ಕಾಂಗ್ರೆಸ್‌ನ ಸುಳ್ಳು ಭರವಸೆಯನ್ನು ನಂಬಲ್ಲ ಎಂದು ಲೇವಡಿ ಮಾಡಿದರು.
ಇದೀಗ ಮುಸ್ಲಿಂ ಮೀಸಲಾತಿ ವಾಪಸ್‌ ತರುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. ಮುಸ್ಲಿಂ ಮೀಸಲಾತಿ ಜಾರಿಗೆ ತರುವುದು ಸಂವಿಧಾನ ವಿರೋಧಿಯಾಗಿದೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ. ಆದಾಗ್ಯೂ ಕೂಡಾ ಕಾಂಗ್ರೆಸ್ ಮತ ಬ್ಯಾಂಕ್‌ಗಾಗಿ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಒಂದು ವೇಳೆ ಬಂದಲ್ಲಿ ಮುಸ್ಲಿಂ ಮೀಸಲಾತಿ ಜಾರಿಗೆ ನಾವು ತೀವ್ರವಾಗಿ ವಿರೋಧ ಮಾಡುತ್ತೇವೆ ಎಂದರು.
ಮುಸ್ಲಿಂ ಮೀಸಲಾತಿ ಜಾರಿ ಮಾಡೋದು ಹಿಂದೂಗಳಿಗೆ ಅಪಮಾನ ಮಾಡಿದಂತೆ. ಇದೀಗ ಕಾಂಗ್ರೆಸ್ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿದೆ.

ಈ ಹಿಂದೆ ನಾವು ಪಿಎಫ್ಐ ಅನ್ನು ಬ್ಯಾನ್‌ ಮಾಡಿದಕ್ಕಾಗಿ ಇದೀಗ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಭಾಗವಾಗಿ ಆರ್.ಎಸ್.ಎಸ್, ಬಜರಂಗದಳವನ್ನು ನಿಷೇಧ ಮಾಡುವುದಾಗಿ ಘೋಷಣೆ ಮಾಡಿದೆ. ದೇಶವನ್ನು ಏನು ಮಾಡಲು ಹೊರಟಿದ್ದೀರಿ ಎಂದು ನಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಕೇಳಲು ಇಚ್ಛೆ ಪಡುತ್ತೇನೆ ಎಂದರು.
ಇದು ತುಷ್ಟೀಕರಣದ ಪರಾಕಾಷ್ಠೆ, ಕಾಂಗ್ರೆಸ್ ಪಕ್ಷದ ಧೋರಣೆ ನೋಡಿದರೆ ಅವರ ಪಕ್ಷ ಭಯೋತ್ಪಾದನೆ ಪರವಾಗಿ ಇದೆ ಎನ್ನುವುದು ಸಾಬೀತಾಗಿದೆ. ಸದ್ಯ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲೀಗ್ ಮ್ಯಾನಿಫೆಸ್ಟೋ ಇರಬಹುದು ಎಂಬ ಅನುಮಾನ ಮೂಡುತ್ತಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಈ ಹಿಂದೆ ಲೋಕಾಯುಕ್ತವನ್ನು ನಿಶಕ್ತಿ ಮಾಡಿದ್ದ ಕಾಂಗ್ರೆಸ್ ಇದೀಗ ಲೋಕಾಯುಕ್ತವನ್ನು ಬಲಿಷ್ಠಗೊಳಿಸಲು ತಿಳಿಸಿದೆ. ಕಾಂಗ್ರೆಸ್ ಪಕ್ಷದ ನಾಯಕರೇ ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಕಾಂಗ್ರೆಸ್ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಅವರು ಅಧಿಕಾರಕ್ಕೆ ಬರುವುದು ತಿರುಕನ ಕನಸು ಎಂದು ಹೇಳಿದರು.

ಇನ್ನು ರಾಜಕೀಯದಲ್ಲಿ ಒಳಹೊಡೆತ, ಹೊರ ಒಡೆತ ಇದೆ ಎಂಬ ಜಗದೀಶ್‌ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್‌ ಜೋಶಿ, ಮೇ.13 ರಂದು ಒಳಹೊಡೆತ, ಹೊರ ಹೊಡೆತ ಗೊತ್ತಾಗುತ್ತದೆ. ಈ ಬಾರಿ ಸೆಂಟ್ರಲ್ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಜಗದೀಶ್‌ ಶೆಟ್ಟರ್‌ಗೆ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದರು.

lokesh

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

11 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago