ಪೆಗಾಸಸ್ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಜ್ಜು: ಇಂದು ರಾಜಭವನಕ್ಕೆ ಮುತ್ತಿಗೆ

ಬೆಂಗಳೂರು: ಪೆಗಾಸಸ್ ಕುತಂತ್ರಾಂಶದ ಮೂಲಕ ರಾಜ್ಯದ ರಾಜಕಾರಣಿಗಳು, ಪತ್ರಕರ್ತರು ಹಾಗೂ ಹೋರಾಟಗಾರರ ಮೇಲೆ ಕೇಂದ್ರ ಸರ್ಕಾರ ಬೇಹುಗಾರಿಕೆ ನಡೆಸುತ್ತಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಹೋರಾಟಕ್ಕೆ ಸಿದ್ದವಾಗಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಮುತ್ತಿಗೆಗೆ ನಿರ್ಧರಿಸಿದ್ದಾರೆ.

ಪೆಗಾಸಸ್ ಬೇಹುಗಾರಿಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ, ಪೆಗಾಸಸ್ ಮೂಲಕ ಫೋನ್ ಟ್ಯಾಪಿಂಗ್ ಮಾಡಿದೆ ಎಂದರೆ ಕೇಂದ್ರ ಸರ್ಕಾರ ಎಂತಹ ಹೀನಾಯ ಸ್ಥಿತಿಗೆ ಇಳಿದಿದೆ ಎಂಬುದು ಗೊತ್ತಾಗುತ್ತದೆ. ಸಂಸತ್ತಿನ ಜಂಟಿ ಸದನ ಸಮಿತಿಯಿಂದ ಈ ಕುರಿತು ತನಿಖೆಯಾಗಬೇಕು. ಇದಕ್ಕಿಂತ ಮುಖ್ಯವಾಗಿ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

× Chat with us