ಬೆಂಗಳೂರು : ಕಾಂಗ್ರೆಸ್ಸಿಗರು ಈಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಶಿಕಾರಿಪುರದ ಶಾಸಕ, ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಕಾಲು ವರ್ಷವೂ ಕಳೆದಿಲ್ಲ ಆಗಲೇ ಕಂಟ್ರಾಕ್ಟ್ ಕಮೀಷನ್, ವರ್ಗಾವಣೆ ವ್ಯಾಪಾರದ ಹೊಲಸು ಮೈಗೆಲ್ಲಾ ಮೆತ್ತಿಸಿಕೊಳ್ಳುತ್ತಿದೆ. ಬಿಜೆಪಿ ಸರ್ಕಾರದ ಮೇಲೆ ಪರ್ಸೆಂಟೇಜ್ ಆರೋಪ ಹೊರಿಸುತ್ತಿದ್ದ ಕಾಂಗ್ರೆಸ್ಸಿಗರು ಇದೀಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿ, ಕಲುಷಿತ ನೀರು ಸೇವಿಸಿ ಸಾರ್ವಜನಿಕರು ಸತ್ತರೆ ನಮ್ಮನ್ನು ಕೇಳಬೇಡಿ. ಆತ್ಮಹತ್ಯೆಯಿಂದ ರೈತರು ಸತ್ತರೆ ಚಿಂತಿಸಬೇಡಿ. ಭ್ರಷ್ಟಾಚಾರ ಮಾಡಿ ಕಮಿಷನ್ ಪಡೆಯಲು ನಾವ್ ರೆಡಿ, ನಾವ್ ರೆಡಿ. ಇದು #ATMSarkara ದ ನಿತ್ಯಗೀತೆ ಎಂದು ಬರೆದು ಟೀಕಿಸಿದೆ.
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು 40% ಕಮಿಷನ್ ಆರೋಪ ಮಾಡಿದ್ದರು. ಈಗ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ 100% ಕಮಿಷನ್ ಆರೋಪ ಮಾಡಲು ಆರಂಭಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…