ಬೆಂಗಳೂರು : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಿಂಗಾಪುರದಲ್ಲಿ ಪಿತೂರಿ ನಡೆಸುತ್ತಿರುವ ಮಾಹಿತಿ ನಮಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ಸಿಂಗಾಪುರಕ್ಕೆ ಹೋಗುತ್ತಿದ್ದಾರೆ. ಇದೆಲ್ಲದರ ಬಗ್ಗೆಯೂ ನಮಗೆ ಮಾಹಿತಿ ಇದೆ. ಅವರ ತಂತ್ರಗಳೇನು ಎಂಬುದು ಗೊತ್ತಿದೆ ಎಂದರು.
ವಿದೇಶದಲ್ಲಿ ಕಾರ್ಯತಂತ್ರ : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಾಕಷ್ಟು ಸಂಚುಗಳು ನಡೆಯುತ್ತಿವೆ ಎಂಬ ಅಸಮಧಾನ ಕಾಂಗ್ರೆಸ್ ವಲಯದಲ್ಲಿ ಆತಂಕ ಮೂಡಿಸಿವೆ.
ಇತ್ತೀಚೆಗೆ ಕಾಂಗ್ರೆಸ್‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಸಂಚಲನ ಮೂಡಿಸುತ್ತಿದೆ. ಅದರ ಜತೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕೆಲ ನಾಯಕರು ಕಾಂಗ್ರೆಸ್‍ನ ಅತೃಪ್ತ ಮತ್ತು ಅಸಮಾಧಾನಿತ ಶಾಸಕರ ಜತೆ ಸಂಪರ್ಕದಲ್ಲಿರುವುದು ಚರ್ಚೆಗೆ ಗ್ರಾಸವಾಗಿತ್ತು.
ಒಟ್ಟು 138 ಶಾಸಕರ ಸಂಖ್ಯಾಬಲ ಹೊಂದಿರುವ ಸ್ಪಷ್ಟ ಬಹುಮತದ ಸರ್ಕಾರವನ್ನು ಪತನಗೊಳಿಸಲು ಅಸಾಧ್ಯ ಎಂಬ ವಿಶ್ವಾಸದ ನಡುವೆಯೂ ಕೆಲವು ಚಟುವಟಿಕೆಗಳು ಅನುಮಾನ ಹುಟ್ಟಿಸುತ್ತಿವೆ. ಚುನಾವಣಾ ಫಲಿತಾಂಶ ಪ್ರಕಟಗೊಳ್ಳುವ ಸಂದರ್ಭದಲ್ಲಿ ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಆಪ್ತರೊಂದಿಗೆ ಸಿಂಗಾಪುರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ರಾಜಕೀಯ ಲೆಕ್ಕಾಚಾರಗಳು ತಲೆಕೆಳಗಾಗಿಸಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಂಡಿತು. ನಂತರದ ಬೆಳವಣಿಗೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪರಸ್ಪರ ಕೈ ಜೋಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸುತ್ತಿವೆ. ಬೆಂಗಳೂರಿನಲ್ಲಿ ನಡೆದ ಇಂಡಿಯಾ ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪ್ರಮುಖರ ಶಿಷ್ಟಾಚಾರ ಪಾಲನೆಗೆ ಐಎಎಸ್ ಅಕಾರಿಗಳನ್ನು ನೇಮಿಸಿರುವುದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಿದ್ದವು.
ಅದರ ಬಳಿಕ ಎರಡು ಪಕ್ಷಗಳ ನಡುವೆ ಮೈತ್ತಿಯಾಗಲಿವೆ ಎಂಬ ಚರ್ಚೆಗಳಿಗೂ ರೆಕ್ಕೆ-ಪುಕ್ಕ ಬಂದಿತ್ತು. ಅದಕ್ಕೆ ಅನುಗುಣವಾಗಿ ಜೆಡಿಎಸ್ ಜಾತ್ಯತೀತ ನಿಲುವಿನ ರಾಜಕೀಯ ಪಕ್ಷಗಳ ಕೂಟವಾಗಿರುವ ಇಂಡಿಯಾ ಸಭೆಯಿಂದ ದೂರ ಉಳಿದಿತ್ತು. ಅತ್ತ ಬಿಜೆಪಿ ನೇತೃತ್ವದ ಎನ್‍ಡಿಎ ಕೂಟದ ಸಭೆಯಲ್ಲೂ ಜೆಡಿಎಸ್ ಕಾಣಿಸಿಕೊಳ್ಳಲಿಲ್ಲ. ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಿದ ಜೆಡಿಎಸ್‍ನ ಶಾಸಕರು ಮತ್ತು ಪ್ರಮುಖರು ನಮ್ಮ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‍ನಿಂದ ಅಂತರ ಕಾಯ್ದುಕೊಳ್ಳಲಿದೆ. ಸಮಾನಾಂತರ ಶಕ್ತಿಯಾಗಿ ಹೋರಾಟ ನಡೆಸಲಿದೆ ಎಂದು ಘೋಷಿಸಿದ್ದರು.
ಆದರೆ ನಂತರದಲ್ಲೂ ತೆರೆಮರೆಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ. ಆಪರೇಷನ್ ಕಮಲಕ್ಕೆ ಪೂರಕವಾಗಿ ಮಾತುಕತೆಗಳಾಗುತ್ತಿವೆ ಎಂಬ ವದಂತಿಗಳಿವೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೂಡ ಖಚಿತ ಪಡಿಸಿದ್ದು, ವಿದೇಶದಲ್ಲಿ ಸರ್ಕಾರದ ಪತನಕ್ಕೆ ಸಂಚು ನಡೆದಿರುವ ಮಾಹಿತಿ ಇದೇ ಎಂದಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…