ಬೆಂಗಳೂರು: ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜುಲೈ 19ಕ್ಕೆ ಡಾ.ಸಿ.ಎನ್.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಆದರೆ ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನಲೆ ಜನವರಿ ತಿಂಗಳವರೆಗೆ ನಿರ್ದೇಶಕರಾಗಿ ಮುಂದುವರಿಯುವಂತೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 2007 ರಿಂದ ಡಾ.ಮಂಜುನಾಥ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷವೇ ಡಾ.ಮಂಜುನಾಥ್ ಅಧಿಕಾರಾವಧಿ ಮುಕ್ತಾಯವಾಗಿತ್ತು. ಆದರೆ ರೋಗಿಗಳು ಮತ್ತು ಸಿಬ್ಬಂದಿ ಒತ್ತಾಯದ ಮೇರೆಗೆ 1 ವರ್ಷ ಮುಂದುವರಿಸಲಾಗಿತ್ತು. ಸದ್ಯ ಅದರಂತೆಯೇ ಇನ್ನೂ 6 ತಿಂಗಳು ನಿರ್ದೇಶಕರಾಗಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಜಯದೇವ ಸಂಸ್ಥೆಯ ಆಡಳಿತ ಮಂಡಳಿ ಜತೆ ಸಿಎಂ ಸಿದ್ಧರಾಮಯ್ಯ ಇಂದು ಮಹತ್ವದ ಸಭೆ ನಡೆಸಿದ್ದರು. ಜಯದೇವ ಆಸ್ಪತ್ರೆಯ ಅಭಿವೃದ್ಧಿ ಹಾಗೂ ನಿರ್ವಹಣೆ ಬಗ್ಗೆ ಮತ್ತು ಜಯದೇವ ಆಸ್ಪತ್ರೆ ನಿರ್ದೇಶಕರ ಆಯ್ಕೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
ಜುಲೈ 19ರಂದು ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವಧಿ ಪೂರ್ಣಗೊಳ್ಳುವ ಹಿನ್ನೆಲೆ ಅವರ ಸೇವಾವಧಿ ಮುಂದುವರಿಸಬೇಕಾ? ಅಥವಾ ಹೊಸ ನಿರ್ದೇಶಕರ ಆಯ್ಕೆ ಮಾಡಬೇಕಾ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…