ಬೆಂಗಳೂರು: ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ರವಿ ಡಿ ಚನ್ನಣ್ಣನವರ್ ಅವರನ್ನು ನೇಮಕ ಮಾಡಲಾಗಿದೆ.
ನೂತನ ರಾಜ್ಯ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದೆ. ಬುಧವಾರ ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.
ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿಯಿಂದ ಅಲೋಕ್ ಕುಮಾರ್ ಅವರನ್ನು ಎಡಿಜಿಪಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಉಮೇಶ್ ಕುಮಾರ್ ಅವರನ್ನು ಎಡಿಜಿಪಿ ಕ್ರೈಂ & ಟೆಕ್ನಿಕಲ್ ಸರ್ವಿಸ್, ಆರ್ ಹಿತೇಂದ್ರ ಅವರನ್ನು ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ ಅವರನ್ನು ಎಡಿಜಿಪಿ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.