ಬೆಂಗಳೂರು : ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ನಟ ಚೇತನ್ ಇತ್ತೀಚ್ಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು.
ಇದೀಗ ನಟ ಚೇತನ್ ಮಾಡಿರುವ ಸಾಮಾಜಿಕ ಜಾಲತಾಣವಾದ ಎಕ್ಸ್ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಕುರಿತಂತೆ ಸಾಕಷ್ಟು ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗಿವೆ. ನಟ ಜಗ್ಗೇಶ್ ಕೂಡ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.
ಕೆಂಪೇಗೌಡ ವಿಜಯನಗರ ಸಾಮ್ರಾಜ್ಯದ ಒಡೆಯನ ತೊಡೆಯ ಮೇಲೆ ಕೂತು ಬೆಳೆದ ಮಗು. ಮುಂದೆ ಸಾಮಾಜಿಕ ನ್ಯಾಯ ಎತ್ತಿ ಸಾರ್ವಭೌಮ. ಇಂದಿನ ನಾಯಿ ನರಿ ಬೊಗಳಿದರೆ ಅವರ ಇತಿಹಾಸ ಬದಲಾಗುವುದೆ.
ಚಿತ್ರರಂಗದಲ್ಲಿ ನೆಲೆಕಾಣದೆ ಚಾಪು ಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತ? ಕಾನೂನಿನಿದೆ ಎಚ್ಚರ ಎಂದು ಸೋಷಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ.