ಚೆನ್ನೈ : ದ್ರಾವಿಡ ಸಿದ್ಧಾಂತವನ್ನು ನಿರ್ಮೂಲನೆ ಕುರಿತಾದ ಸಮಾವೇಶವೊಂದನ್ನು ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿದೆ. ಬಹು-ನಂಬಿಕೆ ವ್ಯವಸ್ಥೆಯ ಸಹ-ಅಸ್ತಿತ್ವವು ಭಾರತದ ಅಸ್ಮಿತೆಯ ಭಾಗವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಯಾರಿಗೂ ಯಾವುದೇ ಸಿದ್ಧಾಂತವನ್ನು ನಿರ್ಮೂಲನೆಗೈಯ್ಯುವ ಸಭೆ ನಡೆಸುವ ಹಕ್ಕಿಲ್ಲ ಎಂದು ತಮ್ಮ ಆದೇಶದಲ್ಲಿ ನ್ಯಾಯಮೂರ್ತಿ ಜಿ ಜಯಚಂದ್ರನ್ ಹೇಳಿದ್ದಾರೆ.
“ದ್ರಾವಿಡ ಸಿದ್ಧಾಂತಗಳು ಮತ್ತು ಇತರ ಸಾಮಾಜಿಕ ಸಮಸ್ಯೆಗಳು” ಎಂಬ ಕುರಿತ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕೆಂದು ಕೋರಿ ಮಗೇಶ್ ಕಾರ್ತಿಕೇಯನ್ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯ ಮೇಲಿನ ಆದೇಶ ಹೊರಡಿಸಿದೆ.
“ಸನಾತನ ಧರ್ಮದ ನಿರ್ಮೂಲನೆ” ಕುರಿತ ಸಮಾವೇಶದಲ್ಲಿ ಪ್ರಚೋದನಾತ್ಮಕ ಭಾಷಣಗಳನ್ನು ಮಾಡಿದ ಆಡಳಿತ ಡಿಎಂಕೆಯ ಸದಸ್ಯರ ವಿರುದ್ಧ ತಮಿಳುನಾಡು ಪೊಲೀಸರೇಕೆ ಕ್ರಮಕೈಗೊಂಡಿರಲಿಲ್ಲ ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಅಧಿಕಾರದಲ್ಲಿರುವವರು ಜನರನ್ನು ಸಿದ್ಧಾಂತ, ಜಾತಿ, ಧರ್ಮಗಳ ಆಧಾರದಲ್ಲಿ ವಿಭಜಿಸುವ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರಿಂದ ದೂರ ಉಳಿದು ಮದ್ಯಪಾನ, ಭ್ರಷ್ಟಾಚಾರ, ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಪ್ರಯತ್ನಿಸಬೇಕು ಎಂದು ನ್ಯಾಯಾಧೀಶರು ಹೇಳಿದರು.
ಅರ್ಜಿದಾರರ ಮನವಿಗೆ ಒಪ್ಪಿದಲ್ಲಿ ಅದು ಶಾಂತಿ ಇನ್ನಷ್ಟು ಹದಗೆಡಲು ಕಾರಣವಾಗಬಹುದು ಎಂದು ನ್ಯಾಯಾಲಯ ಹೇಳಿದೆ.
ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾದಂತೆ, ಅದನ್ನು ನಿರ್ಮೂಲನೆ ಮಾಡಬೇಕೆಂದು ಸಿಎಂ ಎಂ.ಕೆ. ಸ್ಟ್ಯಾಲಿನ್ ಅವರ ಪುತ್ರ ಸಚಿವ ಉದಯನಿಧಿ ಸ್ಟ್ಯಾಲಿನ್ ಹೇಳಿದ್ದು ವಿವಾದಕ್ಕೀಡಾಗಿತ್ತ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…