Mysore
23
light intensity drizzle
Light
Dark

ರಾಜ್ಯ ಸರ್ಕಾರದಿಂದ ಕೊರೊನಾ ಮಾರ್ಗಸೂಚಿ ಪ್ರಕಟ

ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​​1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಕೋವಿಡ್‌ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ತೀವ್ರ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ಮತ್ತು ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧ ವಿಧಿಸುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೋವಿಡ್ ಮಾರ್ಗಸೂಚಿ ಪ್ರಮುಖ ಅಂಶಗಳು?
ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
ಕೊವಿಡ್‌ ನಿರ್ಬಂಧ ಅವಶ್ಯಕತೆ ಇಲ್ಲ
ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು
ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ
ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು
ರೋಗ ಲಕ್ಷಣ ಇರುವವರನ್ನು ಕೊವಿಡ್‌ ಪರಿಶೀಲನೆಗೆ ಒಳಪಡಿಸಬೇಕು
ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ
ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್‌ ಮುಕ್ತಾಯಗೊಳಿಸಲು ಸೂಚನೆ

ಕೋವಿಡ್ ಟೆಸ್ಟ್​ ಕಡ್ಡಾಯವಲ್ಲ: ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗಿರುವುದು ಮತ್ತು ಶಬರಿಮಲೆ ಅಯ್ಯಪ್ಪ ಭಕ್ತರ ಓಡಾಟಕ್ಕೆ ಸಂಬಂಧಿಸಿದಂತೆ ಕೇರಳ ಗಡಿ ಭಾಗದಲ್ಲಿ ನಿಗಾ ವಹಿಸಿದ್ದೇವೆ. ಶಬರಿಮಲೆ ಹೋಗಿದ್ದು ಬಂದವರಿಗೆಲ್ಲಾ ಪರೀಕ್ಷೆ ಮಾಡುತ್ತಿಲ್ಲ. ಶಬರಿಮಲೆಗೆ ಹೋಗಿಬಂದವರಲ್ಲಿ ರೋಗ ಲಕ್ಷಣಗಳು ಇದ್ದರೆ ದಯವಿಟ್ಟು ಯಾರೂ ನಿರ್ಲಕ್ಷ್ಯ ವಹಿಸಬಾರದು. ಕಡ್ಡಾಯವಾಗಿ ಕೋವಿಡ್‌ ಟಸ್ಟ್‌ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ