ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆ

ಧಾರವಾಡ: ಕೊರೊನಾ ಆರ್ಭಟ ತಗ್ಗಿದೆ ಎಂದು ನಿಟ್ಟುಸಿರು ಬಿಡುವ ಬೆನ್ನಲ್ಲೆ ಇದೀಗ ಮತ್ತೆ ತನ್ನ ಆಟ ಶುರು ಮಾಡಿದಂತಿದೆ. ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಧಾರವಾಡದ ಸತ್ತೂರು ಬಡಾಣೆಯಲ್ಲಿರೋ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಆರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆ 300 ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ.

ಇನ್ನೂ 200 ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲು ನಿರ್ಧರಿಸಿದ್ದು, ಹಾಸ್ಟೆಲ್‌ನಲ್ಲಿ ಸೋಂಕಿತರಿಗೆ ಕ್ವಾರಂಟೈನ್ ಮಾಡಲಾಗಿದೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಕಾಲೇಜಿಗೆ ಭೇಟಿ ನೀಡಿದ್ದು ಕಾಲೇಜು ಪ್ರಾಂಶುಪಾಲರ ಜತೆ ಚರ್ಚೆ ನಡೆಸಿದ್ದಾರೆ.

SDM ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಹಿನ್ನೆಲೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ.

× Chat with us