Mysore
17
clear sky

Social Media

ಬುಧವಾರ, 08 ಜನವರಿ 2025
Light
Dark

ರಾಜ್ಯದಲ್ಲಿ ಬ್ಯಾನ್‌ ಆಯ್ತು ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ!

ಬೆಂಗಳೂರು: ಕೃತಕ ಬಣ್ಣಗಳನ್ನು ಬಳಸಿ ತಯಾರಿಸುತ್ತಿದ್ದ ಕಾಟನ್‌ ಕ್ಯಾಂಡಿಯನ್ನು ರಾಜ್ಯಾದ್ಯಂತ ಬ್ಯಾನ್‌ ಮಾಡಲಾಗಿದೆ ಮತ್ತು ಗೋಬಿ ಮಂಚೂರಿಗೆ ಯಾವುದೇ ರಾಸಾಯನಿಕ ಬಳಕೆ ಮಾಡದಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಹೆಚ್ಚಾಗಿ ಮಕ್ಕಳು ಮತ್ತು ಯುವಕರು ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ನು ಸೇವನೆ ಮಾಡುತ್ತಿದ್ದು, ಇದರಲ್ಲಿ ಬಳಸಲಾಗುವ ಕೃತ ಬಣ್ಣವನ್ನು ಬಳಸಿ ಇನ್ಮುಂದೆ ಗೋಬಿ ಮತ್ತು ಕ್ಯಾಂಡಿ ತಯಾರಿಸಿದರೆ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಲಾಗಿದೆ.

ಕನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ.

ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ಬ್ಯಾನ್ ಆಗಿದೆ, ಗೋಬಿಯಲ್ಲಿ ಕೃತಕ ಬಣ್ಣ ಬಳಸಿದರೇ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಗೋಬಿ ಮಂಚೂರಿ ಸಸ್ಯಾಹಾರಿ ಪದಾರ್ಥ, ಹೀಗಾಗಿ ನಿಷೇಧ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕೃತಕ ಬಣ್ಣ ಬಳಸದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್‌ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್‌ ರಾಸಾಯನಿಕ ಅಂಶ ಪತ್ತೆಯಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ