ಬೆಂಗಳೂರು : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ.
ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್‍ಎಲ್‍ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ದರ್ಶಿಸಿದೆ. ಸೂಳ್ಳೂರುಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ.
ಚಂದ್ರಯಾನ, ಮಂಗಳಯಾನದ ನಂತರ ಇಸ್ರೋ ಕೈಗೊಳ್ಳುತ್ತಿರುವ ಅತ್ಯಂತ ಪ್ರಮುಖ ಯೋಜನೆ ಇದಾಗಿದೆ. ಇದೇ ಮೊದಲ ಬಾರಿ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಇದಕ್ಕೆ ಯುರೋಪಿಯನ್ ಸ್ಪೇಸ್ ಏಜೆನ್ಸಿ, ಆಸ್ಟ್ರೇಲಿಯಾ ಸೇರಿ ವಿವಿಧ ದೇಶಗಳ ಅಂತರಿಕ್ಷ ಸಂಸ್ಥೆಗಳ ನೆರವನ್ನು ಇಸ್ರೋ ಪಡೆಯುತ್ತಿದೆ. ಈ ಪ್ರಯೋಗವನ್ನು ನೇರವಾಗಿ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಆದರೆ ಮೊದಲೇ ನೋಂದಣಿ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…