ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೇ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್‌ಡೌನ್ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೋ ಮುಗಿಸಿದ್ದು, ಉಡಾವಣೆಗೆ ಅನುಮತಿ ನೀಡಿದೆ.
ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್‌ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್ ಮತ್ತು ರೋವರ್‌ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್ ಆಗಸ್ಟ್‌ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಈ ಉಡಾವಣೆಯನ್ನು ಇಸ್ರೋದ ಅಧಿಕೃತ ಯೂಟ್ಯೂಬ್ ಚಾನಲ್‌ನಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.
ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.
https://twitter.com/ANI/status/1679305173108404225?s=20





