BREAKING NEWS

ಚಂದ್ರಯಾನ-3 ಗೆ ಕೌಂಟ್‌ಡೌನ್‌ : 1 ದಿನವಷ್ಟೇ ಬಾಕಿ

ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೇ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್‌ಡೌನ್‌ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೋ ಮುಗಿಸಿದ್ದು, ಉಡಾವಣೆಗೆ ಅನುಮತಿ ನೀಡಿದೆ.

ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್‌ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್‌ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್‌ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್‌ ಮತ್ತು ರೋವರ್‌ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್‌ ಆಗಸ್ಟ್‌ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಈ ಉಡಾವಣೆಯನ್ನು ಇಸ್ರೋದ ಅಧಿಕೃತ ಯೂಟ್ಯೂಬ್‌ ಚಾನಲ್‌ನಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.

ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.

https://twitter.com/ANI/status/1679305173108404225?s=20

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

8 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

11 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

11 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

15 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

20 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

20 hours ago