BREAKING NEWS

ಚೈತ್ರಾ ವಂಚನೆ ಪ್ರಕರಣದಲ್ಲಿ ಕುಂದಾಪುರ ಹೆಸರು ಬಳಸದಂತೆ ಕೋರ್ಟ್​​ ತಡೆಯಾಜ್ಞೆ

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಸಾಮಾಜಿಕ ಜಾಲತಾಣ ಹಾಗೂ ಮಾದ್ಯಮಗಳಲ್ಲಿ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್​ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.

ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಕೊನೆಯ ಭಾಗವಾಗಿರುವ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಇಲ್ಲಿನ ಸ್ಥಳೀಯರ ಭಾವನೆಗೆ ದಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್​ ಮೊರೆ ಹೋಗಿದ್ದರು. ಅದರಂತೆ ತಡೆಯಾಜ್ಞೆ ವಿಧಿಸಿದ್ದು, ಎಲ್ಲರಿಗೂ ಸಮನ್ಸ್ ನೀಡಿದ್ದು, ಡಿಸೆಂಬರ್ 5ಕ್ಕೆ ಕಾಯ್ದಿರಿಸಿದ್ದಾರೆ. ಹೈಕೋರ್ಟ್ ವಕೀಲ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.

 

lokesh

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

12 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

12 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

12 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

13 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

13 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

13 hours ago