ವಾರಾಣಾಸಿ : ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ.
ಈ ಮೂಲಕ ಹಿಂದುಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಇನ್ನು ಈ ನಡುವೆ ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.
ಕೋರ್ಟಿನ ಆದೇಶದಂತೆ ಇನ್ನು ೭ದಿನಗಳಲ್ಲಿ ಜ್ಞಾನವಾಪಿ ಮಸೀದಿಯ ಕೆಳ ಮಾಳಿಗೆಯಲ್ಲಿರುವ ದೇವರುಗಳಿಗೆ ಪೂಜಾ ಕೈಂಕರ್ಯ ಪ್ರಾರಂಭವಾಗಲಿದೆ ಎಂದು ಹಿಂದು ಪರ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.
ಸರ್ವೆ ವೇಳೆ ಸಿಕ್ಕಿದ್ದೇನು : ಸರ್ವೆ ವೇಳೆ ಲೆಕ್ಕವಿಲ್ಲದಷ್ಟು ಹಿಂದು ದೇವರ ವಿಗ್ರಹಗಳು ಮತ್ತು ದೇವಾಲಯದ ಕುರುಹುಗಳು ಪತ್ತೆಯಾಗಿದೆ ಎಂದು ತಿಳಿಸಲಾಗಿದೆ.