ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಕಸ್ಟಡಿ ಅಂತ್ಯವಾಗಿದ್ದ ಕಾರಣ ಇಂದು (ಜೂ.22) ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಆರೋಪಿಗಳಾದ ಪ್ರದೂಶ್, ಧನರಾಜ್, ವಿನಯ್ ಸೇರಿ ದರ್ಶನ್‌ರನ್ನು ಪೊಲೀಸರು ಹಾಜರು ಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗಳನ್ನು 13 ದಿನಗಳ ಕಾಲ ಅಂದರೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಮೂಲಕ 13 ವರ್ಷಗಳ ಬಳಿಕ ಮತ್ತೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 2011ರಲ್ಲಿ ಹೆಂಡತಿಯ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ನಟ ದರ್ಶನ್ ಜೈಲು ಸೇರಿದ್ದರು. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜುಲೈ 4ರವರೆಗೆ ಮತ್ತೆ ಜೈಲುವಾಸ ಅನುಭವಿಸಲಿದ್ದಾರೆ.





