ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಿಂದ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಸೂಚನೆ ನೀಡಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 13) ಜನಪ್ರತಿನಿಧಿಗಳ ಸಮನ್ಸ್ ನೀಡಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಮುಖಂಡರು,ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಒಟ್ಟು 36 ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಕ್ಷನ್ 341,143 ಐಪಿಸಿ ಮತ್ತು 103 ಕೆಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪತ್ರಿನಿಧಿಗಳ ಕೋರ್ಟ್, ಜುಲೈ 28ರಂದು ಖುದ್ದು ಹಾಜರಾಗುವಂತೆ 36 ಕಾಂಗ್ರೆಸ್ ನಾಯಕರಿಗೆ ಸಮನ್ಸ್ ನೀಡಿದೆ.
ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…
ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…