BREAKING NEWS

ಖರ್ಗೆಗೆ ಕೋರ್ಟ್ ಸಮನ್ಸ್

ಚಂಡೀಗಢ : ಬಜರಂಗದಳದ ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್‍ನ ಸಂಗ್ರೂರ್‌ ಸ್ಥಳೀಯ ನ್ಯಾಯಾಲಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಇದು ಅಪಾರ ಕಾರ್ಯಕರ್ತರಿಗೆ ಮಾಡಿರುವ ಅಪಮಾನವಾಗಿದೆ ಎಂದು ಹಿಂದೂ ಸುರಕ್ಷಾ ಪರಿಷತ್ ಭಜರಂಗದಳ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ನಡೆದ ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಖರ್ಗೆಯವರು ಪಿಎಫ್‍ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ದಾರೆ. ಇದು ಅವಹೇಳನಕಾರಿ ವಿಚಾರವಾಗಿದೆ ಎಂದು ಅರ್ಜಿದಾರರು ಆರೋಪಿಸಿ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಹಿತೆಶ್ ಅವರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಮೂರ್ತಿ ರಮಣದೀಪ್ ಕೌರ್ ಖರ್ಗೆಯವರಿಗೆ ಸಮನ್ಸ್ ನೀಡಿದ್ದಾರೆ.

lokesh

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

3 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

3 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

3 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

3 hours ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

3 hours ago