ಚಂಡೀಗಢ : ಬಜರಂಗದಳದ ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್‍ನ ಸಂಗ್ರೂರ್ ಸ್ಥಳೀಯ ನ್ಯಾಯಾಲಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.
ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಇದು ಅಪಾರ ಕಾರ್ಯಕರ್ತರಿಗೆ ಮಾಡಿರುವ ಅಪಮಾನವಾಗಿದೆ ಎಂದು ಹಿಂದೂ ಸುರಕ್ಷಾ ಪರಿಷತ್ ಭಜರಂಗದಳ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಇತ್ತೀಚೆಗೆ ನಡೆದ ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಖರ್ಗೆಯವರು ಪಿಎಫ್‍ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ದಾರೆ. ಇದು ಅವಹೇಳನಕಾರಿ ವಿಚಾರವಾಗಿದೆ ಎಂದು ಅರ್ಜಿದಾರರು ಆರೋಪಿಸಿ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಹಿತೆಶ್ ಅವರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಮೂರ್ತಿ ರಮಣದೀಪ್ ಕೌರ್ ಖರ್ಗೆಯವರಿಗೆ ಸಮನ್ಸ್ ನೀಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…