BREAKING NEWS

Covid-19: ಇಂದು 11,692 ಹೊಸ ಪ್ರಕರಣ: 28 ಸಾವು

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 11,692 ಹೊಸ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 66,170ಕ್ಕೆ ಏರಿದೆ.

ಇದೇ ಅವಧಿಯಲ್ಲಿ ಕೋವಿಡ್‌ ಕಾರಣದ 28 ಸಾವುಗಳು ಸಂಭವಿಸಿದ್ದು, ಕೇರಳವೊಂದರಲ್ಲೇ 9 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 5,31,258ಕ್ಕೆ ತಲುಪಿದೆ.

ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 4.48 ಕೋಟಿ (4,48,69,684)ಗೆ ತಲುಪಿದೆ ಎಂಬುದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯಿಂದ ಗೊತ್ತಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,42,72,256 ಕ್ಕೆ ಏರಿದೆ.

ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇಲ್ಲಿಯ ವರೆಗೆ ದೇಶದಲ್ಲಿ 220.66 ಕೋಟಿ ಡೋಸ್‌ ಕೋವಿಡ್‌ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವಾಲಯದ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಲಾಗಿದೆ.

andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

27 mins ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

4 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

4 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

4 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

5 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

5 hours ago