BREAKING NEWS

ಕೋವಿಡ್‌-19: 134 ದಿನಗಳ ಬಳಿಕ 10 ಸಾವಿರ ಗಡಿ ದಾಡಿದ ಸಕ್ರಿಯ ಪ್ರಕರಣ

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,805 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಮೂಲಕ 134 ದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 10,300ಕ್ಕೆ ತಲುಪಿದೆ.

ದೇಶದಲ್ಲಿ ಇದುವರೆಗೆ 4.47 ಕೋಟಿ (4,47,05,952) ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,30,837 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಈವರೆಗೆ ಒಟ್ಟು 4,41,64,815 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 3.19 ಮತ್ತು ವಾರದ ದೃಢ ಪ್ರಮಾಣ ಶೇ 1.39ರಷ್ಟಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.02 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.79 ಆಗಿದೆ.

ದೇಶದಲ್ಲಿ ಈವರೆಗೆ 220.65 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago