ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ದೃಢಪಟ್ಟ 3,016 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇದೀಗ ದಾಖಲಾಗಿರುವ ಹೊಸ ಪ್ರಕರಣಗಳ ಸಂಖ್ಯೆ ಕಳೆದ ಆರು ತಿಂಗಳಲ್ಲೇ ಅಧಿಕವಾಗಿದೆ. 2022 ಅಕ್ಟೋಬರ್‌ನಲ್ಲಿ 2ರಂದು ದಾಖಲಾದ 3,375 ಕೋವಿಡ್ ಪ್ರಕರಣಗಳು ಇಲ್ಲಿವರೆಗಿನ ಅತ್ಯಧಿಕ ಸಂಖ್ಯೆಯಾಗಿತ್ತು.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4.47 ಕೋಟಿಗೆ (4,47,12,692) ಏರಿಕೆಯಾಗಿದೆ. ಆ ಪೈಕಿ 5,30,862 ಮಂದಿ ಸಾವಿಗೀಡಾಗಿದ್ದಾರೆ.
ಕೋವಿಡ್‌ನಿಂದಾಗಿ ಬುಧವಾರ ಕೇರಳದಲ್ಲಿ 8, ಮಹಾರಾಷ್ಟ್ರದಲ್ಲಿ 3, ದೆಹಲಿಯಲ್ಲಿ 2, ಹಾಗೂ ಹಿಮಾಚಲ ಪ್ರದೇಶದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,509ಕ್ಕೆ ಏರಿಕೆಯಾಗಿದೆ.
ಪಾಸಿಟಿವಿಟಿ ದರ ಶೇ 1.71 ರಷ್ಟಿದರೆ, ಚೇತರಿಕೆ ಪ್ರಮಾಣ ಶೇ 98.78 ರಷ್ಟಿದೆ. ಉಳಿದಂತೆ ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ದೇಶದಾದ್ಯಂತ ಇದುವರೆಗೆ 220.65 ಕೋಟಿ ಕೋವಿಡ್ ಡೋಸ್ ಲಸಿಕೆ ವಿತರಿಸಲಾಗಿದೆ.
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…