ಕೋವಿಡ್‌: ಹೋಂ ಕ್ವಾರಂಟೈನ್‌ನಲ್ಲಿದ್ದ ಸಚಿನ್‌ ತೆಂಡೂಲ್ಕರ್‌ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: ವಾರದ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಹೋಂ ಕ್ವಾರಂಟೈನ್‌ನಲ್ಲಿದ್ದ ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಸ್ವತಃ ಟ್ವೀಟ್‌ ಮಾಡಿರುವ ಅವರು, ʻವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದೇನೆ. ಕೆಲವೇ ದಿನಗಳಲ್ಲಿ ಗುಣಮುಖನಾಗಿ ಮನೆಗೆ ಬರಲಿದ್ದೇನೆ. ನನಗಾಗಿ ಪ್ರಾರ್ಥಿಸುತ್ತಿರುವ ಎಲ್ಲರಿಗೂ ಧನ್ಯವಾದ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿʼ ಎಂದು ಹೇಳಿದ್ದಾರೆ.

ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರಿಗೆ ಮಾರ್ಚ್‌ 27 ರಂದು ಕೋವಿಡ್‌ ತಗುಲಿರುವುದು ದೃಢಪಟ್ಟಿತ್ತು. ನಂತರ ಅವರು ಹೋಂ ಕ್ವಾರಂಟೈನ್‌ ಆಗಿದ್ದರು. ಸಚಿನ್‌ ಪತ್ನಿ ಹಾಗೂ ಇತರರ ಪರೀಕ್ಷೆ ವರದಿ ನೆಗೆಟಿವ್‌ ಬಂದಿತ್ತು.

× Chat with us