BREAKING NEWS

ಕೋವಿಡ್‌: ಒಂದೇ ದಿನ 7,830 ಹೊಸ ಪ್ರಕರಣಗಳು ಪತ್ತೆ

ನವದೆಹಲಿ(ಪಿಟಿಐ): ದೇಶದಲ್ಲಿ ಒಂದೇ ದಿನ ಕೋವಿಡ್‌ನ 7,830 ಹೊಸ ಪ್ರಕರಣಗಳು ದಾಖಲಾಗಿವೆ. ಇವು ಕಳೆದ 223 ದಿನಗಳಲ್ಲಿ ದಾಖಲಾದ ದಿನವೊಂದರ ಅಧಿಕ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,215ಕ್ಕೆ ಏರಿಕೆಯಾಗಿದೆ. ಹೊಸದಾಗಿ 16 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 5,31,016ಕ್ಕೆ ಏರಿಕೆಯಾಗಿದೆ. ದೆಹಲಿ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶದಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಗುಜರಾತ್‌, ಹರಿಯಾಣ, ಮಹಾರಾಷ್ಟ್ರ, ತಮಿಳುನಾಡು ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಬ್ಬರು ಮತ್ತು ಕೇರಳದಲ್ಲಿ ಐವರು ಮೃತಪಟ್ಟಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ 1ರಂದು 7,946 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನ ಅತ್ಯಂತ ಹೆಚ್ಚು ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್‌ ಲಸಿಕಾ ಅಭಿಯಾನದ ಅಡಿ ಇದುವರೆಗೆ 220.66 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.

andolanait

Recent Posts

ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ನಟ ರವಿಚಂದ್ರನ್‌ ಚಾಲನೆ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…

8 hours ago

ಅಭಿಮನ್ಯು ಆನೆ ಮಾವುತನ ಪತ್ನಿ ಸಾವು

ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…

9 hours ago

ಮತದಾರರ ಹೆಸರು ಡಿಲೀಟ್‌ ವಿವಾದ: ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್‌ ಗಾಂಧಿ ಹಾಗೂ ‘ಇಂಡಿಯಾ’…

9 hours ago

ಹೆಣ ಇದ್ದ ಸ್ಕಾರ್ಪಿಯೋ ಓಡಿಸಲು ಯಾರೂ ಸಿದ್ಧರಿಲ್ಲ

ಶೆಡ್‌ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…

11 hours ago

ರೇಣುಕಾಸ್ವಾಮಿಯ ಹೆಣ ಬಿಸಾಡಲು ಜಾಗ ಹುಡುಕಾಟ

ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…

12 hours ago

ನೋಟಿನ ಕಂತೆಗಳನ್ನು ತಂದಿಟ್ಟ ದರ್ಶನ್

ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…

12 hours ago