ಕೋವಿಡ್‌ ಅಲರ್ಟ್‌… ಸುಮ್ಮನೆ ಸರ್ಕಾರಿ ಕಚೇರಿ ಸುತ್ತುವಂತಿಲ್ಲ!

ಮೈಸೂರು: ಸರ್ಕಾರಿ ಕಚೇರಿಗಳ ಸಿಬ್ಬಂದಿಗೂ ಕೊರೊನಾ ಸೋಂಕು ತಗುಲುತ್ತಿರುವುದರಿಂದ ಮುಂಜಾಗ್ರತೆ ಕ್ರಮವಾಗಿ ಸುಮ್ಮನೆ ಕಚೇರಿ ಸುತ್ತುವ ಸಾರ್ವಜನಿಕರಿಗೆ ಬ್ರೇಕ್‌ ಹಾಕಲಾಗಿದೆ.

ಸೇವಾ ನಿರತ ಸರ್ಕಾರಿ ಸಿಬ್ಬಂದಿಗೂ ಪಾಸಿಟಿವ್ ದೃಢವಾಗುತ್ತಿರುವುದು ಆತಂಕ ಮೂಡಿಸಿದೆ. ಮೈಸೂರಿನ ಸರ್ಕಾರಿ ಕಚೇರಿಗಳಲ್ಲಿ ಅಗತ್ಯವಿದ್ದವರಿಗಷ್ಟೇ ಪ್ರವೇಶ ಕಲ್ಪಿಸಿ, ಸಣ್ಣಪುಟ್ಟ ವಿಚಾರಗಳಿಗೂ ಬರುತ್ತಿರುವವರನ್ನು ನಿಷೇಧಿಸಲಾಗಿದೆ.

ಮೇಯರ್ ರುಕ್ಮಿಣಿ ಮಾದೇಗೌಡ ಸೇರಿ ಪಾಲಿಕೆಯ ೬ ಸದಸ್ಯರು, ೧೨ ಸಿಬ್ಬಂದಿಗೆ ಪಾಸಿಟಿವ್ ದೃಢವಾಗಿತ್ತು. ಉಳಿದ ಸಿಬ್ಬಂದಿ ಆತಂಕದಲ್ಲೇ ಕಾರ್ಯ ನಿರ್ವಹಿಸುವಂತಾಗಿದೆ. ಹೀಗಾಗಿ ಜಿಪಂ, ಪಾಲಿಕೆ, ಮುಡಾ, ಜಿಲ್ಲಾಧಿಕಾರಿ ಕಚೇರಿ, ಎಸ್ಪಿ ಕಚೇರಿ, ಲೋಕೋಪಯೋಗಿ, ಸಾರ್ವಜನಿಕ ಶಿಕ್ಷಣ ಇಲಾಖೆ, ತಹಸಿಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿಗಳ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾಡಾ ಕಚೇರಿ, ಸಹಕಾರ ಸಂಘಗಳ ನಿಬಂಧಕರ ಕಚೇರಿ, ನ್ಯಾಯಾಲಯ ಸಂಕೀರ್ಣದಲ್ಲಿ ಕೋವಿಡ್ ಹರಡದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸುಮ್ಮನೇ ಓಡಾಡುವವರನ್ನು ಒಳಗೆ ಬಿಡದಂತೆ ನೋಡಿಕೊಳ್ಳಲಾಗುತ್ತಿದೆ.

× Chat with us