ಜಿನೀವಾ: ‘ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದ್ದು, ಕೋವಿಡ್ ಪ್ರಮಾಣ ಕಡಿಮೆಯಾಗುವ ಮೊದಲು ಹೆಚ್ಚಿನ ತೊಂದರೆಯನ್ನುಂಟು ಮಾಡುವ ಸಾಧ್ಯತೆಯಿದೆ ‘ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
‘ಕಳೆದ ಒಂದು ತಿಂಗಳಲ್ಲಿ 23 ಸಾವಿರದಷ್ಟು ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಸುಮಾರು 3 ಲಕ್ಷ ಜನರು ಕೋವಿಡ್‌ಗೆ ತುತ್ತಾಗಿದ್ದಾರೆ‘ ಎಂದು ಕೋವಿಡ್ ಸಂಬಂಧಿ ತಪಾಸಣೆ ಕಡಿಮೆಯಾದ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿದೆ.
‘ಕೋವಿಡ್ ಪರೀಕ್ಷೆಗಳು ಕಡಿಮೆಯಾದ ಕಾರಣ ಅದರ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಆದರೆ ಸಾಂಕ್ರಾಮಿಕವು ನಮ್ಮ ನಡುವೆಯೇ ಇದೆ. ವಾಸ್ತವದಲ್ಲಿ ವೈರಸ್ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ವಿಭಾಗದ ನಿರ್ದೇಶಕರಾದ ಮೈಕಲ್ ರಯಾನ್ ಅವರು ತಿಳಿಸಿದರು.
‘ಶ್ವಾಸಕೋಶಕ್ಕೆ ಸಂಬಂಧಿಸಿದ ವೈರಸ್ ಸಾಂಕ್ರಾಮಿಕ ಹಂತದಿಂದ ಎಂಡಮಿಕ್ ಹಂತಕ್ಕೆ ಹೋಗುವುದಿಲ್ಲ. ಬದಲಾಗಿ, ಕಾಲಕ್ಕೆ ತಕ್ಕಂತೆ ಕಡಿಮೆ ಚಟುವಟಿಕೆಯನ್ನು ತೋರಿಸುವುದರ ಜೊತೆಗೆ ಹೆಚ್ಚಿನ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ‘ ಎಂದು ಹೇಳಿದರು.
‘ಕೊರೊನಾವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಾಗೂ, ದುರ್ಬಲ ಆರೋಗ್ಯ ಹೊಂದಿರುವ ಜನರ ಶ್ವಾಸಕೋಶಕ್ಕೆ ಇದು ಹೆಚ್ಚಿನ ಘಾಸಿ ಉಂಟುಮಾಡಬಹುದು‘ ಎಂದು ರಯಾನ್ ಹೇಳಿದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…