Mysore
27
few clouds

Social Media

ಶುಕ್ರವಾರ, 17 ಜನವರಿ 2025
Light
Dark

ಸಿಎಂ ಬೊಮ್ಮಾಯಿ ಗೆ ಕೋವಿಡ್ ಪಾಸಿಟಿವ್ ದೃಢ : ದೆಹಲಿ ಪ್ರವಾಸ ರದ್ದು

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮತ್ತೊಮ್ಮೆ ಕೊರೋನಾ ಸೋಂಕು  ತಗುಲಿರುವುದು  ದೃಢಪಟ್ಟಿದೆ.  ಕೊರೊನಾದ ಸೌಮ್ಯ ಲಕ್ಷಣಗಳು ಇರುವುದಾಗಿ ಸ್ವತಃ ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದಾರೆ. ಕೋವಿಡ್ ದೃಢಪಟ್ಟಿರುವ ಕಾರಣ ಮುಖ್ಯಮಂತ್ರಿಯ ದೆಹಲಿ ಪ್ರವಾಸ ರದ್ದಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಪ್ರತ್ಯೇಕವಾಗಿ ಇದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬೊಮ್ಮಾಯಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ