ನವದೆಹಲಿ: ಕೋವಿಡ್ ಪರಿಸ್ಥಿತಿಯನ್ನು ಎದುರಿಸುವುದಕ್ಕೆ ಸಂಬಂಧಿಸಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಖಾತ್ರಿಪಡಿಸುವ ಸಲವಾಗಿ ದೇಶದಾದ್ಯಂತ ಸೋಮವಾರ ಹಾಗೂ ಮಂಗಳವಾರ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕ ಹಾಗೂ ಖಾಸಗಿ ಆಸ್ಪತ್ರೆಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿವೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಹರಿಯಾಣದ ಝಜ್ಜರ್‌ನಲ್ಲಿರುವ ಎಐಐಎಂಎಸ್ ಶಾಖೆಗೆ ಸೋಮವಾರ ಭೇಟಿ ನೀಡಿ, ಪರಿಶೀಲನೆ ನಡೆಸುವರು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಚಿವ ಮಾಂಡವೀಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಪರಿಶೀಲನಾ ಸಭೆ ನಡೆದಿತ್ತು. ಆಸ್ಪತ್ರೆಗಳಲ್ಲಿನ ಮೂಲಸೌಕರ್ಯಗಳು ಹಾಗೂ ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿ ಅವುಗಳ ಸನ್ನದ್ಧತೆ ಪರಿಶೀಲಿಸಲು ಏ.10 ಹಾಗೂ 11ರಂದು ಅಣಕು ಕಾರ್ಯಾಚರಣೆ ನಡೆಸಲು ಅಂದಿನ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…