ಮಂಡ್ಯ: ಶೋಭಾ ಕರಂದ್ಲಾಜೆ ʻಜನಾಶೀರ್ವಾದ ಯಾತ್ರೆʼ, ಕೊರೊನಾ ರೂಲ್ಸ್‌ ಬ್ರೇಕ್

ಮದ್ದೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದು, ಕೊರೊನಾ ನಿಯಮವನ್ನು ಗಾಳಿಗೆ ತೂರಿದ್ದಾರೆ.

ಮಂಡ್ಯ ಹಾಗೂ ಮದ್ದೂರಿನಲ್ಲಿ ಕಾರ್ಯಕರ್ತರ ದಂಡು ನೆರೆದಿದ್ದು, ಯಾರೊಬ್ಬರೂ ಕೋವಿಡ್‌ ನಿಯಮ ಪಾಲಿಸಿಲ್ಲ. ಕೇಂದ್ರ ಹಾಗೂ ರಾಜ್ಯ ಸಚಿವರು, ಶಾಸಕರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಅಂತರ ಮರೆತು ರ‍್ಯಾಲಿ ನಡೆಸಿದ್ದಾರೆ.

ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 30ಕ್ಕೂ ಹೆಚ್ಚು ಮಂದಿ ಸೇರಿ ಯಾವುದೇ ಕಾರ್ಯಕ್ರಮ ಮಾಡಬಾರದೆಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಆದೇಶವನ್ನು ಕೇಂದ್ರ ಸಚಿವರು ನಿರ್ಲಕ್ಷಿಸಿದ್ದಾರೆ ಎನ್ನಲಾಗಿದೆ.

× Chat with us