BREAKING NEWS

ರಾಜ್ಯದಲ್ಲಿ ಕೋವಿಡ್‌ ಟೆಸ್ಟ್‌ ಹೆಚ್ಚಳ ಮಾಡಲಾಗುವುದು: ದಿನೇಶ್‌ ಗುಂಡೂರಾವ್‌

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್‌ ಉಲ್ಬಣಗೊಂಡಿರುವ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್‌ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ವೈರಲ್ ಫೀವರ್ ಕಂಡುಬಂದರೆ ಕೊವಿಡ್ ಟೆಸ್ಟ್ ಮಾಡಲಾಗುವುದು. ಕೊವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ.

1 ತಿಂಗಳ ಟೆಸ್ಟ್ ಮಾಡಲು 3 ಲಕ್ಷ ಆರ್‌ಟಿಸಿಪಿಆರ್‌ ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧಿ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ. 3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ ಮತ್ತು ಡಿ.19ರಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಕೊವಿಡ್ ಉಪ ತಳಿ ಪ್ರಕರಣ ದಿನೇದಿನೆ ಹೆಚ್ಚಳವಾಗುತ್ತಿದೆ. ಕರ್ನಾಟಕ ರಾಜ್ಯದಲ್ಲೂ 58 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿತ 47 ಜನ ಹೋಮ್​ ಐಸೋಲೇಷನ್​ನಲ್ಲಿದ್ದಾರೆ. ಕೊರೊನಾ ಸೋಂಕಿತ 6 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್​ನಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಭ್ರೂಣಹತ್ಯೆ ಪತ್ತೆ ಟಾಸ್ಕ್ ಪೋರ್ಸ್ ರಚನೆ : ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ವಿಚಾರವಾಗಿ ಮುಂದಿನ ವಾರದೊಳಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲೂ ಟಾಸ್ಕ್ ಪೋರ್ಸ್ ರಚನೆ ಮಾಡಲು ಸಲಹೆ ಇದೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಕೂಡ ಒಂದೇ ಸಲಹೆ ನೀಡಿದೆ. ಕಾನೂನಾತ್ಮಕ ತೊಡಕು ವಿಚಾರವಾಗಿ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago