ಕೋವಿಡ್‌ ಲಸಿಕೆ ಅಕ್ರಮ ಮಾರಾಟ: ವೈದ್ಯರ ಜಾಮೀನು ಅರ್ಜಿ ವಜಾ

ಬೆಂಗಳೂರು: ಕೋವಿಡ್-‌19 ಲಸಿಕೆಯನ್ನು ಅಕ್ರಮವಾಗಿ ಮಾರಾಟದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವೈದ್ಯರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 52ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ.

ಬಂಧಿತರಾಗಿರುವ ವೈದ್ಯೆ ಪುಷ್ಪಿತಾ (25) ಹಾಗೂ ಪ್ರೇಮಾ (34) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ವೈದ್ಯೆ ಸೇರಿ ಇಬ್ಬರು ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಬಂಧಿಸಿದ್ದರು.

ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆಯಾಗಿದ್ದ ಪುಷ್ಪಿತಾ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಲಸಿಕೆಯನ್ನು ಕದ್ದು ಅನ್ನಪೂರ್ಣೇಶ್ವರಿ ನಗರದ ಪ್ರೇಮಾ ಮನೆಯಲ್ಲಿ ದಾಸ್ತಾನು ಮಾಡಿಸುತ್ತಿದ್ದರು.

ಪ್ರೇಮಾ ಕರೆಸಿದ ವ್ಯಕ್ತಿಗಳಿಂದ ಹಣ ಪಡೆದು ಅಕ್ರಮವಾಗಿ ಲಸಿಕೆ ನೀಡುತ್ತಿದ್ದರು.

× Chat with us