BREAKING NEWS

ಮುಂದುವರಿದ ವ್ಯಾಘ್ರ ದಾಳಿ: ಆತಂಕದಲ್ಲಿ ಜನತೆ.

ಹನಗೋಡು ; ಹಸುವೊಂದು ಮೇವು ಮೇಯ್ಯುವಾಗ ಇಂದು ಮಧ್ಯಾಹ್ನ  ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಘಟನೆ  ಹನಗೋಡು ಸಮೀಪದ ಬಿ ಆರ್ ಕಾವಲು ಅರಣ್ಯದಲ್ಲಿ ನಡೆದಿದೆ.

ಗೌಡಿಕೆರೆ ಗ್ರಾಮದ ಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 ಮೀ. ನಷ್ಟು ಎಳೆದೊಯ್ದು ಬಿಟ್ಟು ಹೋಗಿದೆ. ಹಸುವಿನ ಮಾಲೀಕ ಶೇಖರ್ ಮೇವು ಮೇಯ್ಯುವ ಜಾಗಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಎರಡು ತಿಂಗಳ ಹಿಂದೆ ಹಸುವೊಂದನ್ನು ಹುಲಿ ಗಾಯಗೊಳಿಸಿ ಬಿಟ್ಟು ಹೋಗಿತ್ತು. ಈ ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸತತ ಎರಡು ದಿನ ಹುಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜನತೆ ಆತಂಕಗೊಂಡಿದ್ದು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿ ಸಿದ್ಧರಾಜು ಸ್ಥಳಕ್ಕೆ ಭೇಟಿ ನೀಡಿ ಇಲಾಖೆಯಿಂದ ಬರುವ ಪರಿಹಾರ ಧನವನ್ನು ಕೂಡಲೇ ನೀಡಲಾಗುವುದು ಎಂದು ತಿಳಿಸಿದರು.

ಈ ವ್ಯಾಪ್ತಿಯಲ್ಲಿ ನಿಲ್ಲದ ಹುಲಿ ಅಟ್ಟಹಾಸ ; ನಾಲ್ಕು ಹಸುಗಳು ಬಲಿ
ಭಯ ಹುಟ್ಟಿಸಿದ ಹುಲಿ ಹೆಜ್ಜೆ: ಬಿಲ್ಲೆನಹೊಸಹಳ್ಳಿ ಕೊಳವಿಗೆ ನೇಗತ್ತೂರು ಹೀಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮನೆ ಮಾಡಿದ್ದು.ತಕ್ಷಣ ಹುಲಿ ಹಿಡಿಯಲು ಕ್ರಮ ವಹಿಸಬೇಕು ಎಂದು ಗ್ರಾಂ ಪಂ ಸದಸ್ಯ ಎಚ್‌ ಪಿ ಶಿವಣ್ಣ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ

andolana

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago