ಹನಗೋಡು ; ಹಸುವೊಂದು ಮೇವು ಮೇಯ್ಯುವಾಗ ಇಂದು ಮಧ್ಯಾಹ್ನ ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಘಟನೆ ಹನಗೋಡು ಸಮೀಪದ ಬಿ ಆರ್ ಕಾವಲು ಅರಣ್ಯದಲ್ಲಿ ನಡೆದಿದೆ.
ಗೌಡಿಕೆರೆ ಗ್ರಾಮದ ಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 ಮೀ. ನಷ್ಟು ಎಳೆದೊಯ್ದು ಬಿಟ್ಟು ಹೋಗಿದೆ. ಹಸುವಿನ ಮಾಲೀಕ ಶೇಖರ್ ಮೇವು ಮೇಯ್ಯುವ ಜಾಗಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಎರಡು ತಿಂಗಳ ಹಿಂದೆ ಹಸುವೊಂದನ್ನು ಹುಲಿ ಗಾಯಗೊಳಿಸಿ ಬಿಟ್ಟು ಹೋಗಿತ್ತು. ಈ ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸತತ ಎರಡು ದಿನ ಹುಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜನತೆ ಆತಂಕಗೊಂಡಿದ್ದು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಭಯಭೀತರಾಗಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿ ಸಿದ್ಧರಾಜು ಸ್ಥಳಕ್ಕೆ ಭೇಟಿ ನೀಡಿ ಇಲಾಖೆಯಿಂದ ಬರುವ ಪರಿಹಾರ ಧನವನ್ನು ಕೂಡಲೇ ನೀಡಲಾಗುವುದು ಎಂದು ತಿಳಿಸಿದರು.
ಈ ವ್ಯಾಪ್ತಿಯಲ್ಲಿ ನಿಲ್ಲದ ಹುಲಿ ಅಟ್ಟಹಾಸ ; ನಾಲ್ಕು ಹಸುಗಳು ಬಲಿ
ಭಯ ಹುಟ್ಟಿಸಿದ ಹುಲಿ ಹೆಜ್ಜೆ: ಬಿಲ್ಲೆನಹೊಸಹಳ್ಳಿ ಕೊಳವಿಗೆ ನೇಗತ್ತೂರು ಹೀಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮನೆ ಮಾಡಿದ್ದು.ತಕ್ಷಣ ಹುಲಿ ಹಿಡಿಯಲು ಕ್ರಮ ವಹಿಸಬೇಕು ಎಂದು ಗ್ರಾಂ ಪಂ ಸದಸ್ಯ ಎಚ್ ಪಿ ಶಿವಣ್ಣ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…