ಶಿವಮೊಗ್ಗ: ಲಕ್ಷಾಂತರ ಮಂದಿ ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ತಂದಿದ್ದಾರೆ. ಅ ಹೋರಾಟ ಮಾಡಿದವರಿಗೆ ಅಪಮಾನ ಮಾಡುತ್ತಿದ್ದಾರೆ. ಬ್ರಿಟಿಷರಿಗೆ ಆರು ಬಾರಿ ಕ್ಷಮಾಪಣೆ ಪತ್ರ ಯಾಕೆ ಕೊಟ್ಟರು ಎಂದು ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರು ಮೊದಲು ಹೇಳಲಿ. ಅವರ ಚಿತ್ರಗುಪ್ತ ಪುಸ್ತಕದಲ್ಲೇ ಬ್ರಿಟಿಷರಿಗೆ ಯಾಕೆ ನಾನು ಕ್ಷಮಾಪಣೆ ಕೇಳಿದ್ದೆ ಎಂಬುದರ ಬಗ್ಗೆ ಹೇಳಿಕೊಂಡಿದ್ದಾರೆ. ಇಂತಹ ರಣಹೇಡಿಗಳ ಬಗ್ಗೆ ನಮ್ಮ ಮಕ್ಕಳ ಪಠ್ಯಪುಸ್ತಕದಲ್ಲಿ ಇಡಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಬಿಜೆಪಿ ಅವರು ಎಲೆಕ್ಷನ್ ಅಜೆಂಡವಾಗಿ ಮಾಡಿಕೊಂಡರೆ ಬಹಳ ಸಂತೋಷ. ಈ ಬಾರಿ ಅವರನ್ನು ಜನ ಮನೆಗೆ ಕಳಿಸಿದ್ದಾರೆ. ಮುಂದಿನ ಬಾರಿ ಅವರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದರು.
ಹೆಡ್ಗೇವಾರ್ ಪಠ್ಯಪುಸ್ತಕ ಕೈ ಬಿಡುವ ವಿಚಾರವಾಗಿ ಮಾತನಾಡಿ, ಹೆಡ್ಗೇವಾರ್ ಸ್ವಾತಂತ್ರ್ಯ ಹೋರಾಟಗಾರ ಎಂದು ಮೊದಲು ಸಾಬೀತುಪಡಿಸಲಿ. ಬ್ರಿಟಿಷರ ಬಳಿ ಕ್ಷಮೆ ಕೇಳಿದ ನಕಲಿ ಸ್ವತಂತ್ರ ಹೋರಾಟಗಾರರಿಗೆ ಮನ್ನಣೆ ನೀಡುವುದಾದರೆ ಹೇಗೆ? ಗೋಡ್ಸೆ ಕೂಡ ರಾಷ್ಟ್ರಭಕ್ತ ಎಂದು ಯಾರೋ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರ ರಾಷ್ಟ್ರಭಕ್ತಿಗೂ, ಜನಸಾಮಾನ್ಯರ ರಾಷ್ಟ್ರಭಕ್ತಿಗೂ ಬಹಳಷ್ಟು ವ್ಯತ್ಯಾಸವಿದೆ ಎಂದರು.
ನೈತಿಕ ಪೊಲೀಸ್ ಗಿರಿ ವಿಚಾರವಾಗಿ ಮಾತನಾಡಿ, ನೈತಿಕ ಪೊಲೀಸ್ ಗಿರಿ ಇರುವುದು ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಾತ್ರ. ಬಜರಂಗದಳ ವಿಚಾರದ ಬಗ್ಗೆ ನಮ್ಮ ನಿಲುವನ್ನ ನಾವು ಸ್ಪಷ್ಟಪಡಿಸಿದ್ದೇವೆ. ಬಜರಂಗ ದಳದ ಹೆಸರು ಅವರು ಹೇಳಿದ್ದಕ್ಕೆ ಜನ ಸೋಲಿಸಿ ಕಳಿಸಿದ್ದಾರೆ. ಬಜರಂಗ ಬಲಿ, ಬಜರಂಗದಳ ಅಂತ ಹೇಳಿದ್ದಕ್ಕೆ ನೀವು ಯೋಗ್ಯರಲ್ಲ ಅಂದು ಜನ ತೀರ್ಮಾನಿಸಿದ್ದಾರೆ. ಇವೆಲ್ಲಾ ಬಿಟ್ಟು ಜನರ ಬದುಕಿನ ಬಗ್ಗೆ ಹಾಗೂ ಜನರ ಕಲ್ಯಾಣದ ಬಗ್ಗೆ ಕಾರ್ಯಕ್ರಮ ಮಾಡಬೇಕು. ಇನ್ನು ಮುಂದಾದರೂ ಕೂಡ ಕರ್ನಾಟಕವನ್ನು ಸರ್ವ ಜನ ಸಮಭಾವವೆಂದು ಹೇಳುತ್ತೇವೆ ಅದಕ್ಕೆ ಗೌರವ ಕೊಟ್ಟು ಬಾಳುವುದು ಒಳ್ಳೆಯದು ಎಂದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…