ಕ್ರಿಕೆಟ್‌ ಜೀವನಕ್ಕೆ ಎಬಿಡಿ ವಿದಾಯ; ಆರ್‌ಸಿಬಿಗೆ ಬಿಗ್‌ ಶಾಕ್‌!

ಕೇಪ್ ಟೌನ್: ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸಮನ್ ಎಬಿಡಿ ವಿಲಿಯರ್ಸ್ ಎಲ್ಲ ಬಗೆಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಎಬಿ ಡಿ ವಿಲಿಯರ್ಸ್ ಕ್ರಿಕೆಟ್ ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಡನಾಟವನ್ನು ಕೊನೆಗೊಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ಕ್ರಿಕೆಟ್‌ ದಂತಕತೆ ಹಾಗೂ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್‌ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್ ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ ಶುಕ್ರವಾರ ವಿದಾಯ ಹೇಳಿದ್ದು, ಆ ಮೂಲಕ ತಮ್ಮ 17 ವರ್ಷಗಳ ಕ್ರಿಕೆಟ್‌ ವೃತ್ತಿ ಬದುಕಿಗೆ ಮಿಸ್ಟರ್‌ 360 ಡಿಗ್ರಿ ಖ್ಯಾತಿಯ ಆಟಗಾರ ಪೂರ್ಣ ವಿರಾಮ ಹಾಕಿದ್ದಾರೆ. ಕೇವಲ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಮಾತ್ರವಲ್ಲದೇ ಎಬಿಡಿ ಐಪಿಎಲ್, ಕೌಂಟಿ ಸೇರಿದಂತೆ ಎಲ್ಲ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಈ ಕುರಿತಂತೆ ತಮ್ಮ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಎಬಿ ಡಿವಿಲಿಯರ್ಸ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ನನ್ನ ಕ್ರಿಕೆಟ್‌ ವೃತ್ತಿ ಜೀವನ ನಂಬಲಾಗದ ಪ್ರಯಾಣವಾಗಿದೆ, ಆದರೆ ನಾನು ಎಲ್ಲಾ ಸ್ವರೂಪದ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ,” ಎಂದು ಎಬಿಡಿ ಟ್ವೀಟ್‌ ಮಾಡುವ ಮೂಲಕ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಎಬಿ ಡಿವಿಲಿಯರ್ಸ್ 114 ಟೆಸ್ಟ್‌, 228 ಓಡಿಐ ಹಾಗೂ 78 ಟಿ20 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಪ್ರತಿನಿಧಿಸಿದ್ದಾರೆ. ಅವರು 20,014 ಅಂತಾರಾಷ್ಟ್ರೀಯ ರನ್‌ಗಳನ್ನು ಕಲೆ ಹಾಕಿದ್ದಾರೆ.

× Chat with us