Mysore
22
overcast clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕ್ರಿಕೆಟಿಗ ರಿಷಭ್​​​ ಪಂತ್​ ಕಾರು ಅಪಘಾತ : ಪರಿಸ್ಥಿತಿ ಗಂಭೀರ

ರೂರ್ಕಿ(ಉತ್ತರಾಖಂಡ): ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಿಂದ ಮನೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ.

ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ವಿಕೆಟ್​ ಕೀಪರ್​ ರಿಷಭ್ ಪಂತ್​​ ಅವರನ್ನು ದೆಹಲಿಗೆ ರೆಫರ್ ಮಾಡಲಾಗಿದೆ. ಅಲ್ಲಿ ಅವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ಖಾನ್‌ಪುರ ಶಾಸಕ ಉಮೇಶ್‌ ಕುಮಾರ್‌, ಪಂತ್​ ಅವರ ಆರೋಗ್ಯ ಸ್ಥಿತಿ ತಿಳಿಯಲು ಆಸ್ಪತ್ರೆಗೆ ಆಗಮಿಸಿದ್ದರು.

ಕಾಲಿಗೆ ಗಂಭೀರ ಗಾಯ: ರಿಷಭ್​ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯವಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಭ್​ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ರವಾನಿಸಲಾಗಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಸುಶೀಲ್ ನಗರ್ ತಿಳಿಸಿದ್ದಾರೆ. ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ