ರೂರ್ಕಿ(ಉತ್ತರಾಖಂಡ): ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಿಂದ ಮನೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ.
ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ದೆಹಲಿಗೆ ರೆಫರ್ ಮಾಡಲಾಗಿದೆ. ಅಲ್ಲಿ ಅವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ಖಾನ್‌ಪುರ ಶಾಸಕ ಉಮೇಶ್ ಕುಮಾರ್, ಪಂತ್ ಅವರ ಆರೋಗ್ಯ ಸ್ಥಿತಿ ತಿಳಿಯಲು ಆಸ್ಪತ್ರೆಗೆ ಆಗಮಿಸಿದ್ದರು.
ಕಾಲಿಗೆ ಗಂಭೀರ ಗಾಯ: ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯವಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಭ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ರವಾನಿಸಲಾಗಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಸುಶೀಲ್ ನಗರ್ ತಿಳಿಸಿದ್ದಾರೆ. ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…