BREAKING NEWS

ಮೋದಿ ಉಪನಾಮ ಟೀಕೆ: ಏ.25ರಂದು ರಾಹುಲ್‌ ಖುದ್ದು ಹಾಜರಿಗೆ ಪಟ್ನಾ ಕೋರ್ಟ್‌ ನೋಟಿಸ್‌

ಪಟ್ನಾ (ಪಿಟಿಐ): ‘ಮೋದಿ’ ಉಪ ನಾಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಬಿಹಾರದ ಪಟ್ನಾ ಕೋರ್ಟ್‌ ಇದೇ 25ರಂದು ಖುದ್ದು ಹಾಜರಾಗಲು ಬುಧವಾರ ನೋಟಿಸ್‌ ನೀಡಿದೆ.

ಬಿಜೆಪಿಯ ರಾಜ್ಯಸಭೆ ಸದಸ್ಯ ಮತ್ತು ಮಾಜಿ ಉಪ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಅವರು ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದ ಸ್ಪೆಷಲ್‌ ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ಆದಿ ದೇವ್‌ ಅವರು ಏಪ್ರಿಲ್‌ 12ರಂದು ರಾಹುಲ್‌ ಗಾಂಧಿ ಅವರ ಖುದ್ದು ಹಾಜರಾತಿಗೆ ಕಳೆದ ಮಾರ್ಚ್‌ 18ರಂದು ಆದೇಶ ಹೊರಡಿಸಿದ್ದರು. ಆದರೆ, ಬುಧವಾರದ ವಿಚಾರಣೆಯಲ್ಲಿ ರಾಹುಲ್‌ ಗಾಂಧಿ ಅವರ ವಕೀಲರು, ಇಡೀ ತಂಡ ಸೂರತ್‌ ಕೋರ್ಟ್‌ ಆದೇಶದ ಪ್ರಕರಣದಲ್ಲಿ ನಿರತರಾಗಿದ್ದಾರೆ. ಇದರಿಂದ ಖುದ್ದು ಹಾಜರಾತಿಗೆ ಸಮಯಾವಕಾಶ ನೀಡುವಂತೆ ಮನವಿ ಮಾಡಿದರು.

ವಕೀಲರ ಕೋರಿಕೆ ಮಾನ್ಯ ಮಾಡಿದ ನ್ಯಾಯಾಧೀಶರು, ಏ.25ರಂದು ನಡೆಯಲಿರುವ ಪ್ರಕರಣದ ಮುಂದಿನ ವಿಚಾರಣೆಗೆ ರಾಹುಲ್‌ ಗಾಂಧಿ ಖುದ್ದು ಹಾಜರಿರಬೇಕು ಎಂದು ಅವರ ವಕೀಲರಿಗೆ ಸೂಚಿಸಿದರು.

ದೂರುದಾರರ ಹೇಳಿಕೆಗಳನ್ನು ದಾಖಲಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಿರುವ ಎಲ್ಲ ಪುರಾವೆಗಳು ಮತ್ತು ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಮಾತ್ರ ದಾಖಲಿಸಬೇಕಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರಾದ ಪ್ರಿಯಾ ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು.

‘ಮೋದಿ’ ಉಪನಾಮ ಕುರಿತ ಹೇಳಿಕೆಗೆ ಸೂರತ್‌ ಕೋರ್ಟ್‌ ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಅವರು ಲೋಕಸಭಾ ಸದಸ್ಯತ್ವದಿಂದಲೂ ಅನರ್ಹರಾಗಿದ್ದಾರೆ.

andolanait

Recent Posts

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

19 mins ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

28 mins ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

1 hour ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

1 hour ago

ಕೃಷಿ ಪಂಪ್‌ಸೆಟ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶ : ವ್ಯಕ್ತಿ ಸಾವು

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…

2 hours ago

ಹೊಸವರ್ಷ : ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…

4 hours ago