ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಿ,ಟಿ ರವಿ ಅವರಿಗೆ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ ಆಸ್ಪತ್ರೆಯಿಂದ ಹೊರ ಬೀಳಬೇಕಿದೆ.
ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ನಿನ್ನೆ ಕುಟುಂಬ ಸಮೇತ ಚಿಕ್ಕಮಗಳೂರಿನಲ್ಲಿ ಮತದಾನ ಮಾಡಿದ್ದರು.